Belagavi News In Kannada | News Belgaum

ರಾಜ್ಯ ಸರ್ಕಾರಿ ನೌಕರ ಸಂಘ ಹುಕ್ಕೇರಿ ತಾಲೂಕು ಘಟಕದ ಅಧ್ಯಕ್ಷರಾಗಿ ಅವಿನಾಶ್ ಆಯ್ಕೆ

ಬೆಳಗಾವಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘದ ಹುಕ್ಕೇರಿ ತಾಲೂಕಾ ಘಟಕದ ನೂತನ ಅಧ್ಯಕ್ಷರಾಗಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ಯ ಇಲಾಖೆ ನೌಕರ ಅವಿನಾಶ್ ಹೊಳೆಪ್ಪಗೋಳ ಅವಿರೋಧ ಆಯ್ಕೆಯಾಗಿದ್ದಾರೆ.
ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದ ತಾಲೂಕು ಪಂಚಾಯತ್ ಸಭಾ ಭವನದಲ್ಲಿ ಜರಗಿದ ಚುನಾವಣಾ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಯಾರು ನಾಮಪತ್ರ ಸಲ್ಲಿಸದ ಹಿನ್ನಲೆ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಜಗದೀಶ್ ಗೌಡ ಪಾಟೀಲ್ ಅವರ ಸಮ್ಮುಖದಲ್ಲಿ ಅವಿನಾಶ್ ಅವರನ್ನು ತಾಲೂಕು ಅಧ್ಯಕ್ಷರನ್ನಾಗಿ ಚುನಾವಣಾ ಅಧಿಕಾರಿ ಚಂದ್ರಶೇಖರ್ ಕೋಲಕಾರ ಘೋಷಣೆ ಮಾಡಿದರು.
ನೂತನ ಖಜಾಂಚಿಯಾಗಿ ಲೋಕೋಪಯೋಗಿ ಇಲಾಖೆಯ ವಿ.ಎಸ್ ಹಿರೇಮಠ ಹಾಗೂ ರಾಜ್ಯ ಪರಿಷತ್ ಸದಸ್ಯರಾಗಿ ಆರೋಗ್ಯ ಇಲಾಖೆಯ ಸಂತೋಷ ಪಾಟೀಲ್ ಅವರು ಆಯ್ಕೆಯಾದರು. ಈ ಸಂಧರ್ಭದಲ್ಲಿ ನೂತನ ಅಧ್ಯಕ್ಷ ಅವಿನಾಶ್ ಹೊಳೆಪ್ಪಗೋಳ ಮಾತನಾಡಿ, ರಾಜ್ಯಾಧ್ಯಕ್ಷ  ಸಿ ಎಸ್ ಷಡಾಕ್ಷರಿ ಹಾಗೂ ಜಿಲ್ಲಾಧ್ಯಕ್ಷ ಜಗದೀಶ್ ಗೌಡ ಪಾಟೀಲ್ ಅವರ ಮಾರ್ಗದರ್ಶದಲ್ಲಿ ಅವರ ನೇತೃತ್ವದಲ್ಲಿ ತಾಲೂಕಾ ನೌಕರ ಸಂಘ ಕ್ರಿಯಾಶೀಲ ಕಾರ್ಯ ನಿರ್ವಸುತ್ತದೆ. ಸಂಘವನ್ನ ಬಲಪಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಲ್ಲದೆ ತಾಲೂಕಿನಲ್ಲಿಯ ಸರ್ಕಾರಿ ನೌಕರರ ಶ್ರೇಯೋಭಿವೃದ್ಧಿಗಾಗಿ ಸಂಘ ಯಾವುದೇ ರೀತಿಯ ಹೋರಾಟಕ್ಕೆ ಸಿದ್ಧವಿದೆ ಎಂದು ಅವರು ಹೇಳಿದರು.
ಜಿಲ್ಲಾಧ್ಯಕ್ಷ ಜಗದೀಶ್ ಗೌಡ ಪಾಟೀಲ್ ಮಾತನಾಡಿ, ನೂತನ ಅಧ್ಯಕ್ಷ ಅವಿನಾಶ್ ಅವರು ಉತ್ತಮ ಸಂಘಟನಾಕಾರರಾಗಿದ್ದು, ಮುಂಬರುವ ದಿನಗಳಲ್ಲಿ ಸಂಘದ ಎಲ್ಲ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡ ತಾಲೂಕಿನಲ್ಲಿ ಅತ್ಯುತ್ತಮ ಕಾರ್ಯ ನಿರ್ವಹಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಈ ಸಂಧರ್ಭದಲ್ಲಿ ನಿಕಟಪೂರ್ಪ ಸರಕಾರಿ ನೌಕರ ಸಂಘ ಅಧ್ಯಕ್ಷ ಎಂ.ಎಂ ನಾಯಿಕ ನೂತನ ಅಧ್ಯಕ್ಷರಿಗೆ ನಡಾವಳಿ ಪುಸ್ತಕ ಹಸ್ತಾಂತರ ಮಾಡಿದರು.
ಈ ಸಂದರ್ಭದಲ್ಲಿ ಗೌರವ ಅಧ್ಯಕ್ಷ ಎಸ್.ಎಸ್ ಕರಿಗಾರ, ಎನ್.ಆರ್ ಪಾಟೀಲ್, ಎನ್.ಬಿ ಗುಡಸಿ, ಎಸ್.ಎಲ್ ನಾಯೀಕ, ಗೌತಮ ಚಲುವಾದಿ, ನವೀನ್ ಬಾಯಿನಾಯಿಕ, ಎಸ್. ಎಂ ನಾಯಿಕ, ಮೋಹನ ಹೆಳಗೇರಿ, ಬಿಕೆ ಚೌಗಲಾ, ಶ್ರವಣ ರಾಣವಗೋಳ, ಪಿ.ಎಂ ಯಮಕನಮರಡಿ, ಎಸ್.ಡಿ ಗಂಗನ್ನವರ, ಎಂ.ಎಸ್ ಖೋತ, ಎಸ್.ಎಮ್ ನಡುಮನಿ  ಇದ್ದರು.