Belagavi News In Kannada | News Belgaum

ಬ್ಲ್ಯಾಕ್​ ಮೇಲ್​ ಮಾಡಿ ಹಣ ವಸೂಲಿ ಮಾಡಿದ್ದ ಡಿವೈಎಸ್​​ಪಿ ಮಲ್ಲಿಕಾರ್ಜುನ್ ಅಮಾನತು

ರಾಯಚೂರು: ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ‌ ಪ್ರಕರಣದಲ್ಲಿ ಎರಡು ದಿನಗಳ ಹಿಂದಷ್ಟೇ ಬಂಧನಕ್ಕೊಳಗಾಗಿದ್ದ ಡಿವೈಎಸ್​ಪಿ ಅವರನ್ನು ಶನಿವಾರ ಅಮಾನತುಗೊಳಿಸಿ ಆದೇಶಿಸಲಾಗಿದೆ.

ರಾಯಚೂರು ಜಿಲ್ಲೆಯ ಲಿಂಗಸೂಗುರು ಡಿವೈಎಸ್​ಪಿ ಮಲ್ಲಿಕಾರ್ಜುನ್ ಸಾಲಿ ಅವರನ್ನು ಅಮಾನತ್ತುಗೊಳಿಸಲಾಗಿದೆ. ಪಿಎಸ್‌ಐ ಪರೀಕ್ಷೆಯ ಅಕ್ರಮದ ಬಗ್ಗೆ ಮಾಹಿತಿ ಪಡೆದು ಜ್ಞಾನ ಜ್ಯೋತಿ ಶಾಲೆಯ ಕಾರ್ಯದರ್ಶಿ ,‌ ಹೆಡ್‌ ಮಾಸ್ಟರ್ ಗೆ ಬ್ಲ್ಯಾಕ್ ಮೇಲ್ ಮಾಡಿ‌ದ್ದ ಸಾಲಿ ಹಣ ವಸೂಲಿಗೆ ಬೇಡಿಕೆ ಇಟ್ಟಿದ್ದರು.

ಪ್ರಕರಣವನ್ನು ಮುಚ್ಚಿಹಾಕಲು 10 ಲಕ್ಷ ರೂ. ಹಣವನ್ನು ವಸೂಲಿ ಮಾಡಿರುವ ಆರೋಪ ಇವರ ಮೇಲಿದೆ. ಸದ್ಯ ಅಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.