Belagavi News In Kannada | News Belgaum

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಳೆ ಬೆಳಗ್ಗೆ 8 ಗಂಟೆಗೆ ದೆಹಲಿ ಪ್ರವಾಸ ಕೈಗೊಳ್ಳಲಿದ್ದಾರೆ

ಬೆಂಗಳೂರು:  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಳೆ ಬೆಳಗ್ಗೆ 8 ಗಂಟೆಗೆ ದೆಹಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಈ ಸಂದರ್ಭದಲ್ಲಿ ಸಂಪುಟ ವಿಸ್ತರಣೆ ಸಂಬಂಧ ವರಿಷ್ಠರ ಜೊತೆ ಚರ್ಚೆ ನಡೆಸುವ ಸಾಧ್ಯತೆ ಇದೆ ಎನ್ನಲಾಗ್ತಿದೆ. ಪ್ರಮುಖವಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಸಂಪುಟ ಸರ್ಜರಿಗೆ ಗ್ರೀನ್ ಸಿಗ್ನಲ್ ಪಡೆಯುವ ಸಾಧ್ಯತೆ ಇದೆ.

ಸಂಜೆ ಇನ್ವೆಸ್ಟ್ ಕರ್ನಾಟಕ‌ ಸಂಬಂಧ ವಿವಿಧ ದೇಶಗಳ ರಾಯಭಾರಿಗಳು ಹಾಗೂ ಹೈ ಕಮಿಷನರ್​​ಗಳನ್ನು ಭೇಟಿ ಮಾಡಲಿದ್ದಾರೆ.

 

ಇದೇ ವೇಳೆ ರಾಜ್ಯದಲ್ಲಿ ಹೂಡಿಕೆ ಸಂಬಂಧ ಆಯಾ ದೇಶಗಳಲ್ಲಿ ರೋಡ್ ಶೋ ಮಾಡುವ ನಿಟ್ಟಿನಲ್ಲಿ ಚರ್ಚೆ ನಡೆಸಲಿದ್ದಾರೆ. ಬುಧವಾರ ಬೆಂಗಳೂರಿಗೆ ಮರಳಲಿದ್ದಾರೆ.