Belagavi News In Kannada | News Belgaum

ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಬಳಕೆ ನಿಯಂತ್ರಿಸಬೇಕಿದೆ: ನಿವೃತ್ತ ನ್ಯಾ. ಸುಭಾಷ್ ಅಡಿ

 

ಬೆಳಗಾವಿ,ಮೇ10 : ಕರ್ನಾಟಕ ಸರ್ಕಾರ ಈಗಾಗಲೇ ಕೆಲವೊಂದು ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳನ್ನು ನಿಷೇಧಿಸಿದೆ. ಅಂತಹ ವಸ್ತುಗಳ ಮಾರಾಟ ಮತ್ತು ಬಳಕೆಯನ್ನು ಸಂಪೂರ್ಣವಾಗಿ ಹತೋಟಿಗೆ ತರಬೇಕು. ಸಂಗ್ರಹಿಸಿದ ಪ್ಲಾಸ್ಟಿಕ್ ತ್ಯಾಜ್ಯವನ್ನು ಬೇಲ್ ಮಾಡಿ, ಹತ್ತಿರದ ಸಿಮೆಂಟ್ ಕಾರ್ಖಾನೆಗಳಿಗೆ ಕಳುಹಿಸಬೇಕು. ನಿಷೇಧಿತ ಏಕ ಬಳಕೆಯ ಪ್ಲಾಸ್ಟಿಕ ಬಳಕೆ ಮಾಡುವ/ಮಾರಾಟ ಮಾಡುವ ವ್ಯಾಪಾರಸ್ಥರಿಂದ ದಂಡ ವಸೂಲಿ ಮಾಡಬೇಕೆಂದು ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ರಾಜ್ಯ ಮಟ್ಟದ ಸಮಿತಿಯ ಅಧ್ಯಕ್ಷರಾಗಿರುವ ಹೈಕೋರ್ಟ್ ನಿವೃತ್ತ ನ್ಯಾಯಾಧೀಶ ಸುಭಾಷ್ ಬಿ.ಅಡಿ ಅಧಿಕಾರಿಗಳಿಗೆ ಸೂಚಿಸಿದರು.

ಸವದತ್ತಿ ಯಲ್ಲಮ್ಮಾ ಪುರಸಭೆಯ ಘನತ್ಯಾಜ್ಯ ವಸ್ತು ವಿಲೇವಾರಿ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು ಪುರಸಭೆ ಮತ್ತು ಶ್ರೀ ರೇಣುಕಾ ಯಲ್ಲಮ್ಮಾ ದೇವಸ್ಥಾನ ಟ್ರಸ್ಟ ಕಮೀಟಿಯ ಅಧಿಕಾರಿಗಳೊಂದಿಗೆ ಪರಿಶೀಲನೆ ಸಭೆ ನಡೆಸಿದರು.

ಮೂಲದಲ್ಲಿಯೇ ಘನತ್ಯಾಜ್ಯ ವಸ್ತುಗಳನ್ನು ಹಸಿಕಸ, ಒಣಕಸ ಹಾಗೂ ಗೃಹಬಳಕೆಯ ಹಾನಿಕಾರಕ ತ್ಯಾಜ್ಯವೆಂದು ವಿಂಗಡಿಸುವ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಕಾರ್ಯಕ್ರಮಗಳನ್ನು ಏರ್ಪಡಿಸಲು ತಿಳಿಸಿದರು. ವಿಶೇಷವಾಗಿ ದೇವಸ್ಥಾನದ ಆವರಣದಿಂದ ಉತ್ಪತ್ತಿಯಾಗುವ ಹೂವಿನ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಲು ಮತ್ತು ಗೃಹಬಳಕೆಯ ಹಾನಿಕಾರಕ ತ್ಯಾಜ್ಯ ವಸ್ತುಗಳನ್ನು ಪ್ರತ್ಯೇಕವಾಗಿ ಸಂಗ್ರಹಣೆ ಮಾಡಿ ಸಾಮೂಹಿಕ ಜೈವಿಕ ವೈದ್ಯಕೀಯ ತ್ಯಾಜ್ಯ ನಿರ್ವಹಣಾ ಘಟಕದೊಂದಿಗೆ ಒಪ್ಪಂದ ಮಾಡಿಕೊಂಡು, ವೈಜ್ಞಾನಿಕ ವಿಲೇವಾರಿ ಮಾಡಲು ಕ್ರಮಕೈಗೊಳ್ಳಬೇಕು ಎಂದು ತಿಳಿಸಿದರು.

ಗೃಹ ಹಾಗೂ ವಾಣ ಜ್ಯ ಘಟಕಗಳಿಂದ ಉತ್ಪತ್ತಿಯಾಗುವ ಕಲುಷಿತ ನೀರನ್ನು ಸಂಸ್ಕರಿಸಲು ಎಸ್.ಟಿ.ಪಿ.ಯನ್ನು ಆದ್ಯತೆ ಮೇರೆಗೆ ಸ್ಥಾಪಿಸಲು ತಿಳಿಸಿದರು.

ಸಭೆಯಲ್ಲಿ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಹಿರಿಯ ಪರಿಸರ ಅಧಿಕಾರಿ ರಾಜಶೇಖರ ಪುರಾಣ ಕ, ಪರಿಸರ ಅಧಿಕಾರಿ ಜಗದೀಶ ಆಯ್.ಎಚ್, ಶ್ರೀ ರೇಣುಕಾ ಯಲ್ಲಮ್ಮಾ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ದೊಡ್ಡಗೌಡ್ರ, ಸವದತ್ತಿ ಯಲ್ಲಮ್ಮಾ ಪುರಸಭೆ ಮುಖ್ಯಾಧಿಕಾರಿಗಳು ಪಿ.ಎಮ್.ಚನ್ನಪ್ಪನವರ, ಸಹಾಯಕ ಕಾರ್ಯಪಾಲಕ ಅಭಿಯಂತರರು(ಪರಿಸರ), ಎಮ್.ಎಚ್.ಗಜಾಕೋಶ, ಹಾಗೂ ಇತರರು ಸಭೆಯಲ್ಲಿ ಪಾಲ್ಗೊಂಡಿದ್ದರು.