Belagavi News In Kannada | News Belgaum

ಮೇ 16ಕ್ಕೆ ಶೈಕ್ಷಣಿಕ ವರ್ಷ ಪ್ರಾರಂಭ; 30 ಸಾವಿರ ವಿದ್ಯಾರ್ಥಿಗಳ ಪೋಷಕರಿಗೆ ಪತ್ರ ಬರೆದ ಸಾಹುಕಾರ

ಬೆಳಗಾವಿ: ಮೇ 16ರಿಂದ ರಾಜ್ಯದಲ್ಲಿ ಶಾಲೆಗಳು ಪ್ರಾರಂಭವಾಗುತ್ತಿರುವ ಹಿನ್ನೆಲೆ ಮೊದಲ ದಿನವೇ ಮಕ್ಕಳನ್ನು ಶಾಲೆಗೆ ಕಳುಹಿಸುವಂತೆ 30 ಸಾವಿರ ಪೋಷಕರಿಗೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪತ್ರ ಬರೆದು ಮನವಿಯೊಂದನ್ನು ಮಾಡಿಕೊಂಡಿದ್ದಾರೆ.

ಬೆಳಗಾವಿ ಜಿಲ್ಲೆಯ ಗೋಕಾಕ್ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಮಕ್ಕಳ ಶೈಕ್ಷಣಿಕ ಗುಣಮಟ್ಟದ ಜೊತೆಗೆ ಕಲಿಕಾ ಸಾಮರ್ಥ್ಯ ಹೆಚ್ಚಿಸಲು ತರಗತಿಗಳು ಉಪಯುಕ್ತ. ಹೀಗಾಗಿ ಬರುವ ಶೈಕ್ಷಣಿಕ ವರ್ಷದಲ್ಲಿ ಮಕ್ಕಳು ತರಗತಿಗೆ ಹೆಚ್ಚು ಹಾಜರಾಗುವ ನಿಟ್ಟಿನಲ್ಲಿ ರಮೇಶ್ ಜಾರಕಿಹೊಳಿ ಸ್ವತಃ ಪಾಲಕರಿಗೆ ಮನವಿ ಪತ್ರ ಬರೆದಿದ್ದು ಶಾಲಾ ಆರಂಭದ ಮೊದಲ ದಿನವೇ ಮಕ್ಕಳು ಶಾಲೆಗೆ ಹಾಜರಾಗುವಲ್ಲಿ ಪೋಷಕರ ಪಾತ್ರ ಬಹಳ ಮುಖ್ಯ. ಹೀಗಾಗಿ ತಮ್ಮ ಮಕ್ಕಳನ್ನು ಮೊದಲ ದಿನವೇ ಶಾಲೆಗೆ ಕಳುಹಿಸುವಂತೆ ಗೋಕಾಕ್ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಸುಮಾರು 30ಸಾವಿರ ಪಾಲಕರಿಗೆ ಪತ್ರ ಬರೆದಿದ್ದಾರೆ.

ಕಳೆದೆರಡು ವರ್ಷಗಳಿಂದ ಶಾಲೆಗಳ ಸರಿಯಾಗಿ ನಡೆಯದೇ ಶಿಕ್ಷಣ ವ್ಯವಸ್ಥೆಯಲ್ಲಿ ಕುಂಠಿತವಾಗಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಶಾಸಕರು ಖುದ್ದಾಗಿ ಗಮನ ಹರಿಸಿ ಮಕ್ಕಳಿಗೆ ಸುಮಾರು 30 ಸಾವಿರ ಪಾಲಕರ ಮನೆಗಳಿಗೆ ಪತ್ರ ಬರೆದಿದ್ದಾರೆ. ರಮೇಶ್ ಜಾರಕಿಹೊಳಿ ಅವರ ಶೈಕ್ಷಣಿಕ ಕಾಳಜಿಗೆ ಶಿಕ್ಷಣ ಇಲಾಖೆ ಕೂಡ ತುಂಬಾ ಸಂತಸ ವ್ಯಕ್ತಪಡಿಸಿದೆ.