Belagavi News In Kannada | News Belgaum

ಕಂದಕಕ್ಕೆ ಉರುಳಿದ ಕಾರು: ನಾಲ್ವರು ದುರ್ಮರಣ

ಶಿಮ್ಲಾ: ವಾಹನ ಕಂದಕಕ್ಕೆ ಉರುಳಿದ ಪರಿಣಾಮ ನಾಲ್ವರು ಪ್ರವಾಸಿಗರು ಮೃತಪಟ್ಟಿದ್ದು, ಮೂವರು ಗಾಯಗೊಂಡಿರುವ ಘಟನೆ ಹಿಮಾಚಲ ಪ್ರದೇಶದ ಕುಲು ಜಿಲ್ಲೆಯಲ್ಲಿನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಜಾರ್-ಜಲೋರಿ-ಜೋಟ್ ರಸ್ತೆಯ ಘಿಯಾಗಿ ಪ್ರದೇಶದ ಬಳಿ ಈ ಅಪಘಾತ ಸಂಭವಿಸಿದ್ದು, ಗಾಯಗೊಂಡ ಮೂವರು ಪ್ರಯಾಣಿಕರನ್ನು (ಇಬ್ಬರು ಮಹಿಳೆಯರು, ಒಬ್ಬ ಪುರುಷ) ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಸಾವಿಗೀಡಾದ ಪ್ರವಾಸಿಗರ ಗುರುತು ಇನ್ನೂ ಪತ್ತೆಯಾಗಿಲ್ಲ. ಅಪಘಾತಕ್ಕೀಡಾದ ಎಸ್‌ಯುವಿ ವಾಹನವು ದೆಹಲಿ ನೋಂದಣಿ ಸಂಖ್ಯೆಯನ್ನು ಹೊಂದಿದೆ ಎಂದು ಹೇಳಿದ್ದಾರೆ.
ಭಾನುವಾರ ತಡರಾತ್ರಿ ಈ ಘಟನೆ ನಡೆದಿದೆ. ಕಾರು ಕಂದಕಕ್ಕೆ ಬಿದ್ದಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಂತರ ಸ್ಥಳಕ್ಕೆ ಆಗಮಿಸಿದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಗಾಯಾಳುಗಳನ್ನು ರಕ್ಷಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಅಪಘಾತದ ಹಿಂದಿನ ನಿಖರ ಕಾರಣ ತಿಳಿಯಲು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.//////