ಪರಿಷತ್ ಚುನಾವಣೆ: ಶಸ್ತ್ರಾಸ್ತ್ರ ವಿನಾಯಿತಿ ನೀಡಲು ಜಿಲ್ಲಾಮಟ್ಟದ ಸ್ಕ್ರೀನಿಂಗ್ ಕಮಿಟಿ ರಚನೆ

ಮೇ 18 ರೊಳಗೆ ಅರ್ಜಿ ಸಲ್ಲಿಸಲು ಜಿಲ್ಲಾಧಿಕಾರಿ ಸೂಚನೆ
ಬೆಳಗಾವಿ,ಮೇ.16: ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಆಯುಧ ಲೈಸೆನ್ಸುದಾರರು ಆಯುಧಗಳು/ ಶಸ್ತ್ರಾಸ್ತ್ರಗಳನ್ನು ಜೊತೆಗಿಟ್ಟುಕೊಂಡು ತಿರುಗಾಡುವುದನ್ನು ನಿμÉೀಧಿಸಿದೆ. ಖಾಸಗಿ ಭದ್ರತಾ ಸಂಸ್ಥೆಗಳು ಹಾಗೂ ಖಾಸಗಿ ಗನಮ್ಯಾನ್ ಗಳು ಇದರಿಂದ ವಿನಾಯಿತಿ ಪಡೆಯಲು ಜಿಲ್ಲಾ ಮಟ್ಟದ ಶಸ್ತ್ರಾಸ್ತ್ರ ಸ್ಕ್ರೀನಿಂಗ್ ಕಮಿಟಿಗೆ ಅರ್ಜಿ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.
ಜಿಲ್ಲಾಮಟ್ಟದ ಶಸ್ತ್ರಾಸ್ತ್ರ ಸ್ಕ್ರೀನಿಂಗ್ ಕಮಿಟಿಯ ಅಧ್ಯಕ್ಷರಾಗಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಸದಸ್ಯರಾಗಿ ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಲಕ್ಷ್ಮಣ ನಿಂಬರಗಿ ಹಾಗೂ ಸದಸ್ಯ ಕಾರ್ಯದರ್ಶಿಯಾಗಿ ಹೆಚ್ಚುವರಿ ಪೆÇಲೀಸ್ ವರಿμÁ್ಠಧಿಕಾರಿ ಎಂ.ಬಿ.ನಂದಗಾವಿ ಸದಸ್ಯ ಕಾರ್ಯ ನಿರ್ವಹಿಸಲಿದ್ದಾರೆ.
ಶಸ್ತ್ರಾಸ್ತ್ರ ಠೇವಣಿಯಿಂದ ವಿನಾಯಿತಿ ಬಯಸುವ ಖಾಸಗಿ ಭದ್ರತಾ ಸಂಸ್ಥೆಗಳು ಹಾಗೂ ಖಾಸಗಿ ಗನಮ್ಯಾನ್ ಗಳು ಮೇ. 18ರೊಳಗಾಗಿ ಜಿಲ್ಲಾಮಟ್ಟದ ಸ್ಕ್ರೀನಿಂಗ್ ಕಮೀಟಿಗೆ ಅರ್ಜಿ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.
ಈಗಾಗಲೇ ಆಯುಧಗಳನ್ನು ಠೇವಣಿ ಮಾಡುವುದಕ್ಕೆ ಜಿಲ್ಲಾಧಿಕಾರಿ ಅವರು ಸೂಚಿಸಿದ್ದು, ಶಸ್ತ್ರಾಸ್ತ್ರ ಠೇವಣಿ ಮಾಡಿದ ಬಗ್ಗೆ ಅಗತ್ಯ ಸ್ವೀಕೃತಿ ಪತ್ರ ನೀಡಲು ಮತ್ತು ಚುನಾವಣೆ ಫಲಿತಾಂಶ ಹೊರಬಿದ್ದ ಒಂದು ವಾರದ ನಂತರ ಆಯುಧಗಳನ್ನು ಸಂಬಂಧಿಸಿದವರಿಗೆ ವಾಪಸ್ ನೀಡಲು ಅಗತ್ಯ ಕ್ರಮ ತೆಗೆದುಕೊಳ್ಳಲು ಪೆÇಲೀಸ್ ಆಯುಕ್ತರು, ಹೆಚ್ಚುವರಿ ಜಿಲ್ಲಾ ದಂಡಾಧಿಗಳು, ಮಹಾನಗರ ಪಾಲಿಕೆ, ಹಾಗೂ ಆರಕ್ಷಕ ಅಧೀಕ್ಷಕರಿಗೆ ನಿರ್ದೇಶನ ನೀಡಿದ್ದಾರೆ.////
ವಿಧಾನ ಪರಿಷತ್ ಚುನಾವಣೆ: ಮತ ಎಣಿಕೆ ಕೇಂದ್ರ ಸ್ಥಾಪನೆಗೆ ಸ್ಥಳ ಪರಿಶೀಲಿಸಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ
ಬೆಳಗಾವಿ, ಮೇ 16 : ವಿಧಾನ ಪರಿಷತ್ತಿನ ವಾಯವ್ಯ ಪದವೀಧರ ಹಾಗೂ ಶಿಕ್ಷಕರ ಮತಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಮತ ಎಣಿಕೆ ಕೇಂದ್ರ ಹಾಗೂ ಸ್ಟ್ರಾಂಗ್ ರೂಮ್ ಸ್ಥಾಪನೆಗಾಗಿ ಸಹಾಯಕ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಸ್ಥಳ ಪರಿಶೀಲಿಸಿದರು.
ನಗರದ ಜ್ಯೋತಿ ಕಾಲೇಜಿಗೆ ಸೋಮವಾರ(ಮೇ 16) ಭೇಟಿ ನೀಡಿದ ಜಿಲ್ಲಾಧಿಕಾರಿ ಮತ ಎಣಿಕೆ ಕೊಠಡಿಗಳು ಮತ ಪೆಟ್ಟಿಗೆಗಳನ್ನು ಕಾಯ್ದಿರಿಸುವ ಭದ್ರತಾ ಕೊಠಡಿಗಳ ಸ್ಥಾಪನೆ ಕುರಿತು ಪರಿಶೀಲಿಸಿದರು.
ಕಾಲೇಜಿನ ತರಗತಿ ಕೊಠಡಿಗಳನ್ನು ಪರಿಶೀಲಿಸಿದ ಅವರು, ಚುನಾವಣಾ ಆಯೋಗದ ಮಾರ್ಗಸೂಚಿ ಪ್ರಕಾರ ಮತ ಎಣಿಕೆ ಹಾಗೂ ಭದ್ರತಾ ಕೊಠಡಿ(ಸ್ಟ್ರಾಂಗ್ ರೂಮ್)ಗಳನ್ನು ಸ್ಥಾಪಿಸುವ ಬಗ್ಗೆ ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಿದರು.
ಇದಲ್ಲದೇ ಪಾಕಿರ್ಂಗ್ ವ್ಯವಸ್ಥೆ, ವಿದ್ಯುತ್ ಸೌಲಭ್ಯ, ಕುಡಿಯುವ ನೀರು ಮತ್ತಿತರ ಮೂಲಸೌಕರ್ಯಗಳ ಬಗ್ಗೆ ಮಾಹಿತಿಯನ್ನು ಪಡೆದುಕೊಂಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು, ಕೋವಿಡ್ ನಿಯಮಾವಳಿ ಪಾಲನೆ ಸೇರಿದಂತೆ ಎಲ್ಲ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಚುನಾವಣಾ ಆಯೋಗಕ್ಕೆ ಪ್ರಸ್ತಾವನೆ ಕಳಿಸಲಾಗುವುದು ಎಂದು ತಿಳಿಸಿದರು.
ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಸಂಜೀವಕುಮಾರ್ ಹುಲಕಾಯಿ ಅವರು, ಮತ ಎಣಿಕೆ ಹಾಗೂ ಭದ್ರತಾ ಕೊಠಡಿ(ಸ್ಟ್ರಾಂಗ್ ರೂಮ್) ಸ್ಥಾಪನೆಗೆ ಸಂಬಂಧಿಸಿದಂತೆ ರೂಪುರೇμÉಗಳ ಕುರಿತು ಜಿಲ್ಲಾಧಿಕಾರಿಗಳಿಗೆ ವಿವರಿಸಿದರು.
ಬೆಳಗಾವಿ ನಗರ ಪೆÇಲೀಸ್ ಆಯುಕ್ತರಾದ ಡಾ.ಎಂ.ಬಿ.ಬೋರಲಿಂಗಯ್ಯ, ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಉಪ ವಿಭಾಗಾಧಿಕಾರಿ ರವೀಂದ್ರ ಕರಲಿಂಗಣ್ಣವರ ಹಾಗೂ ಕಾಲೇಜಿನ ಸಿಬ್ಬಂದಿ ಉಪಸ್ಥಿತರಿದ್ದರು.////
ವಿಶ್ವ ಡೆಂಗೀ ದಿನಾಚರಣೆ
ಡೆಂಗೀ ನಿಯಂತ್ರಣಕ್ಕೆ ಜನರಲ್ಲಿ ಜಾಗೃತಿ ಮೂಡಿಸಬೇಕಿದೆ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ
ಬೆಳಗಾವಿ, ಮೇ.16: ಡೆಂಗೀ, ಚಿಕುನ್ಗುನ್ಯ, ಮಲೇರಿಯಾದಂತಹ ಸಾಂಕ್ರಾಮಿಕ ರೋಗಗಳು ಬಾಧಿಸದಂತೆ ಜನಸಾಮಾನ್ಯರು ಮುಂಜಾಗೃತೆ ವಹಿಸಬೇಕು ಈ ನಿಟ್ಟಿನಲ್ಲಿ ಆರೋಗ್ಯ ಇಲಾಖಾಧಿಕಾರಿಗಳು ಜನರಿಗೆ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.
ರಾಷ್ಟ್ರೀಯ ಡೆಂಗೀ ದಿನಾಚರಣೆ ಹಿನ್ನೆಲೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸೋಮವಾರ (ಮೇ.16) ಹಮ್ಮಿಕೊಂಡಿದ್ದ ಡೆಂಗೀ ಜಾಗೃತಿ ಜಾಥಾಗೆ ಜಾಲನೆ ನೀಡಿ ಅವರು ಮಾತನಾಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಶಶಿಕಾಂತ ಮುನ್ಯಾಳ ಮಾತನಾಡಿ ಮನೆ ಸುತ್ತಮುತ್ತ ಇರುವ ಪ್ರದೇಶದ ಘನತ್ಯಾಜ್ಯ ವಸ್ತುಗಳಲ್ಲಿ ಮಳೆನೀರು ಸಂಗ್ರಹವಾಗದಂತೆ ಎಚ್ಚರಿಕೆ ವಹಿಸುವುದರಿಂದ ಮತ್ತು ಬ್ಯಾರಲ್ ಸಿಮೆಂಟ್ ಟ್ಯಾಂಕ್, ಇನ್ನಿತರ ನೀರು ನಿಲ್ಲುವ ಸ್ಥಳಗಳಲ್ಲಿ ಈಡೀಸ್ ಸೊಳ್ಳೆಗಳು ಉತ್ಪತ್ತಿ ಆಗುವುದನ್ನು ತಡೆಗಟ್ಟುವುದರಿಂದ ಡೆಂಗೀ ತಡೆಗಟ್ಟಬಹುದು ಎಂದು ಹೇಳಿದರು.
ಡೆಂಗೀ ನಿಯಂತ್ರಣದಲ್ಲಿ ಸಮುದಾಯದ ಭಾಗವಹಿಸುವಿಕೆ ಪ್ರಮುಖವಾಗಿದೆ. ಸಂಬಂಧಪಟ್ಟ ಇಲಾಖಾಧಿಕಾರಿಗಳ ಸಹಕಾರವೂ ಅಗತ್ಯವಾಗಿದ್ದು, ಜನರಲ್ಲಿ ಯಾವುದೇ ರೀತಿಯಲ್ಲಿ ಜ್ವರ ಕಂಡುಬಂದರೆ ನಿರ್ಲಕ್ಷ್ಯವಹಿಸದೇ ತಕ್ಷಣವೇ ವೈದ್ಯರ ಬಳಿ ತೆರಳಿ ಚಿಕಿತ್ಸೆ ಪಡೆದುಕೊಳ್ಳುವುದು ಉತ್ತಮ ಎಂದು ಅಧಿಕಾರಿ ಡಾ. ಶಶಿಕಾಂತ ಮುನ್ಯಾಳ ತಿಳಿಸಿದರು.
ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ಎಮ್.ಎಸ್.ಪಲ್ಲೇದ ಮಾತನಾಡಿ ಸರ್ಕಾರ, ಆರೋಗ್ಯ ಇಲಾಖೆ ಮಾರ್ಗಸೂಚಿಯಂತೆ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಹೇಳಿದರು.
ಡೆಂಗೀ ನಿಯಂತ್ರಣಕ್ಕಾ ಸಾರ್ವಜನಿಕರಲ್ಲಿ ಬೃಹತ್ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಈಡೀಸ್ ಸೊಳ್ಳೆಗಳು ಹಗಲು ಹೊತ್ತಿನಲ್ಲಿ ಕಚ್ಚುವುದರಿಂದ ಹಗಲು ಹೊತ್ತಿನಲ್ಲಿ ವಿಶ್ರಾಂತಿ ಪಡೆದುಕೊಳ್ಳುವವರು ವಿಶೇಷವಾಗಿ ಮಕ್ಕಳು, ಗರ್ಭಿಣಿಯರು, ವೃದ್ಧರು ಸೊಳ್ಳೆ ಪರದೆಗಳನ್ನು ಬಳಸಬೇಕು. ನಗರಸಬೇ, ಪುರಸಭೆ, ಪಟ್ಟಣ ಪಂಚಾಯಿತಿ ಸಹಕಾರದೊಂದಿಗೆ ಪ್ರತಿ ತಿಂಗಳು ಮೊದಲ ಮತ್ತು ಮೂರನೇ ಶುಕ್ರವಾರ ಮನೆ ಮನೆಗೆ ತೆರಳಿ ಡೆಂಗೀ, ಚಿಕುನ್ ಗುನ್ಯ ರೋಗಗಳ ತಡೆಗೆ ಜಾಗೃತಿ ಮೂಡಿಸಲಾಗುವುದು ಎಂದು ತಿಳಿಸಿದರು.
ರಾಷ್ಟ್ರೀಯ ಡೆಂಗೀ ದಿನಾಚರಣೆ ಹಿನ್ನೆಲೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಡೆಂಗೀ, ಚಿಕುನ್ಗುನ್ಯ, ಮಲೇರಿಯಾದಂತ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕೈಗೊಳ್ಳಬಹುದಾದ ಮುಂಜಾಗೃತಾ ಕ್ರಮಗಳ ಕುರಿತಾಗಿ ಪ್ರದರ್ಶನ ಮಗಳಿಗೆಗಳನ್ನು ತೆರೆಯಲಾಗಿತ್ತು. ಈ ಪ್ರದರ್ಶನದಲ್ಲಿ ಈಡೀಸ್ ಲಾರ್ವಾಗಲು, ಈಡೀಸ್ ಸೊಳ್ಳೆಗಳ ಮಾದರಿ ಲಾರ್ವಾಹಾರಿ ಮೀಳುಗಳಾದ ಗಪ್ಪಿ, ಗ್ಯಾಂಬುಷಿಯಾ, ಬ್ಯಾನರ್ ಭಿತ್ತಿಚಿತ್ರಗಳು, ಡೆಂಗ್ಯೂ ಕೈಪಿಡಿ, ಕಿರು ಹೊತ್ತಿಗೆ , ಲಾರ್ವಾ ನಾಶಕ ದ್ರಾವಣ ಜನರ ಗಮನ ಸೆಳೆದವಲ್ಲದೇ ಈ ಮೂಲಕವೂ ಜಾಗೃತಿ ಮೂಡಿಸಲಾಯಿತು. ಹಾಗೇ ಜಿಲ್ಲಾಧಿಕಾರಿ ಕಚೇರಿ ಆವರಣದಿಂದÀ ಶುರುವಾದ ಜಾಗೃತಿ ಜಾಥಾ ಚನ್ನಮ್ಮ ವೃತ್ತದ ಮಾರ್ಗವಾಗಿ ಬೋಗಾರವೇಸ್ವರೆಗೂ ತಲುಪಿ ಕೊನೆಗೊಂಡಿತು.
ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್ ಹೆಚ್.ವ್ಹಿ, ಜಿಲ್ಲಾ ಕಾರ್ಯಕ್ರಮ ಅನುಷ್ಠಾನಾಧಿಕಾರಿ, ಪಾಲಿಕೆ ಆರೋಗ್ಯಾಧಿಕಾರಿ, ಆರೋಗ್ಯ ಇಲಾಖೆ ಸಿಬ್ಬಂದಿ, ಆಶಾ ಕಾರ್ಯಾಕರ್ತೆಯರು, ಕೆಎಲ್ಇ ಔಷಧೀಯ ಮಹಾವಿದ್ಯಾಲಯದ ಎನ್ಎಸ್ಎಸ್ ಘಟಕದ ವಿದ್ಯಾರ್ಥಿಗಳು, ಶ್ರೀ ವಸಂತರಾವ್ ಪೋಥದಾರ ತಾಂತ್ರಿಕ ವಿದ್ಯಲಯದ ಎನ್.ಎಸ್.ಎಸ್ ಘಟಕದ ವಿದ್ಯಾರ್ಥಿಗಳು ಭಾಗಿಯಾಗಿದ್ದರು.
ಕೃಷಿ ಇಲಾಖೆಯಲ್ಲಿ ಅರ್ಜಿ ಆಹ್ವಾನ
ಬೆಳಗಾವಿ,ಮೇ 16 : ಕೃಷಿ ಇಲಾಖೆಯಲ್ಲಿ 2022-23 ನೇ ಸಾಲಿನ ಆತ್ಮ ಯೋಜನೆಯಡಿ ತಾಲೂಕು ತಾಂತ್ರಿಕ ವ್ಯವಸ್ಥಾಪಕರು (ಹುದ್ದೆ ಸಂಖ್ಯೆ-01, ಕೃಷಿ ಅಥವಾ ಕೃಷಿ ಸಂಬಂಧಿತ ವಿಷಯದಲ್ಲಿ ಸ್ನಾತಕೋತ್ತರ ಪದವಿಯೊಂದಿಗೆ ಕಂಪ್ಯೂಟರ್ ಜ್ಞಾನ. ಕೃಷಿ ವಿಸ್ತರಣೆಯಲ್ಲಿ 2 ವರ್ಷ ಅನುಭವ) ಮತ್ತು ಸಹಾಯಕ ತಾಂತ್ರಿಕ ವ್ಯವಸ್ಥಾಪಕರು (ಹುದ್ದೆ ಸಂಖ್ಯೆ 02, .ಕೃಷಿ ಅಥವಾ ಕೃಷಿ ಸಂಬಂಧಿತ ವಿಷಯದಲ್ಲಿ ಪದವಿ/ಸ್ನಾತಕೋತ್ತರ ಪದವಿಯೊಂದಿಗೆ ಕಂಪ್ಯೂಟರ್ ಜ್ಞಾನ. ಕೃಷಿ ವಿಸ್ತರಣೆಯಲ್ಲಿ ಕನಿಷ್ಠ 1 ವರ್ಷ ಅನುಭವ) ಹೊಂದಿರವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ನಗರದ ಶಿವಾಜಿ ನಗರದಲ್ಲಿರುವ ಜಂಟಿ ಕೃಷಿ ನಿರ್ದೇಶಕರ ಕಾರ್ಯಾಲಯ ಇವರಿಗೆ ದೃಢೀಕೃತ ವಿದ್ರ್ಯಾಹತೆ ಸಂಬಂಧ ಪುಟ್ಟ ದಾಖಲಾತಿಗಳೊಂದಿಗೆ ಜೂನ್ 04, ಸಾಯಂಕಾಲ 5 ಗಂಟೆಯೊಳಗಾಗಿ ಅರ್ಜಿಯನ್ನು ಸಲ್ಲಿಸಬೇಕು ಎಂದು ಬೆಳಗಾವಿ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರು ಹಾಗೂ ಯೋಜನಾ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.////
ಮೇ 17 ರಂದು ಅಂಗನವಾಡಿ ಕೇಂದ್ರಗಳ ಪ್ರಾರಂಭೋತ್ಸವ
ಬೆಳಗಾವಿ,ಮೇ 16: ಜಿಲ್ಲೆಯ ಅಂಗನವಾಡಿ ಕೇಂದ್ರಗಳ ಪ್ರಾರಂಭೋತ್ಸವ ಹಾಗೂ ಶೃಷ್ಠಿ ಮತ್ತು ಕ್ಷೀರಭಾಗ್ಯ ಯೋಜನೆಯ ವಿಸ್ತರಣೆಯ ಉದ್ಘಾಟನೆಯನ್ನು ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳಲ್ಲಿ ಮೇ 17 ರಂದು ವಿಭಿನ್ನವಾಗಿ ಆಚರಿಸಲಾಗುತ್ತಿದೆ.
2022-23 ನೇ ಸಾಲಿನ ಅಯವ್ಯಯದಲ್ಲಿ ಘೋಷಿಸಿದಂತೆ, ತೀವ್ರ ಅಪೌಷ್ಟಿಕ ಮಕ್ಕಳಿಗೆ ಶೃಷ್ಠಿ ಹಾಗೂ ಕ್ಷೀರಭಾಗ್ಯ ಯೋಜನೆಯಡಿ ಅಂಗನವಾಡಿ ಕೇಂದ್ರಗಳಲ್ಲಿ ನೀಡಲಾಗುತ್ತಿದ್ದ ವಾರದಲ್ಲಿ 6 ತಿಂಗಳಿನಿಂದ 3 ವರ್ಷದ ಸಾಧಾರಣ ಅಪೌಷ್ಠಿಕ ಮಕ್ಕಳಿಗೆ ವಾರದಲ್ಲಿ 3 ದಿನ ಮೊಟ್ಟೆ ಹಾಗೂ 3 ದಿನ 200 ಎಂ.ಎಲ್. ಹಾಲನ್ನು, ಮೊಟ್ಟೆ ಸ್ವಿಕರಿಸದಿರುವ ಮಕ್ಕಳಿಗೆ ವಾರದಲ್ಲಿ 6 ದಿನ ಹಾಲನ್ನು ನೀಡುವುದು.
3 ವರ್ಷದಿಂದ 6 ವರ್ಷದ ಸಾಧಾರಣ ಅಪೌಷ್ಟಿಕ ಮಕ್ಕಳಿಗೆ ವಾರದಲ್ಲಿ 5 ದಿನ ಮೊಟ್ಟೆ ಹಾಗೂ 3 ದಿನ 200 ಎಂ.ಎಲ್. ಹಾಲನ್ನು, ಮೊಟ್ಟೆ ಸ್ವೀಕರಿಸದಿರುವ ಮಕ್ಕಳಿಗೆ ವಾರದಲ್ಲಿ 6 ದಿನ ಹಾಲನ್ನು ನೀಡುವ ಜಿಲ್ಲೆಯಲ್ಲಿರುವ ಸಾಧಾರಣ ಅಪೌಷ್ಟಿಕ ಮಕ್ಕಳಿಗೂ ವಿಸ್ತರಿಸಲಾಗಿದ್ದು, ಜಿಲ್ಲೆಯ ಎಲ್ಲರೂ ಇದರ ಉಪಯೋಗ ಒಡೆದುಕೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.///