ತಹಶೀಲ್ದಾರ್ ಕಚೇರಿ ಮೇಲೆ ಎಸಿಬಿ ದಾಳಿ

ಬೆಳಗಾವಿ: ವಿನಾಕಾರಣ ದಾಖಲೆ ನೀಡಲು ತೊಂದರೆ ನೀಡುವುದು, ಲಂಚಕ್ಕೆ ಬೇಡಿಕೆ ಇಡುವದಕ್ಕೆ ಸಂಬಂಧಪಟ್ಟಂತೆ ಹೆಚ್ಚಿನ ಸಂಖ್ಯೆಯಲ್ಲಿ ದೂರುಗಳು ದಾಖಲಾದ ಹಿನ್ನೆಲೆಯಲ್ಲಿ ಅಥಣಿಯ ತಹಶೀಲ್ದಾರ್ ಕಾರ್ಯಾಲಯದ ಮೇಲೆ ಭ್ರಷ್ಟಾಚಾರ ನಿರ್ಮೂಲನಾ ದಳದ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ.
ತಹಶೀಲ್ದಾರ್ ದುಡಂಪ್ಪ ಕೋಮಾರ ಹಾಗೂ ಇತರ ಸಿಬ್ಬಂದಿಗಳ ವಿಚಾರಣೆ ನಡೆಸಲಾಗುತ್ತಿದೆ. ಸೂಮಾರು 50ಕ್ಕೂ ಹೆಚ್ಚು ಸಿಬ್ಬಂದ್ದಿ ದಾಳಿ ನಡೆಸಿದ್ದು, ತಹಶೀಲ್ದಾರ್ ಕಚೇರಿಯ ವಿವಿಧ ವಿಭಾಗಗಳ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ದಾಖಲೆಗಳ ಪರಿಶೀಲನೆ ನಾಳೆಯೂ ಮುಂದುವರೆಯುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.