Belagavi News In Kannada | News Belgaum

ಜಿಲ್ಲಾಧಿಕಾರಿ ಕಚೇರಿ ಮೇಲೆ ಎಸಿಬಿ ದಾಳಿ

ಬೆಂಗಳೂರು: ನಗರದ ಡಿ.ಸಿ ಕಚೇರಿಗೆ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು ಇಬ್ಬರು ಭ್ರಷ್ಟ ಅಧಿಕಾರಿಗಳಿಗೆ ಬಲೆ ಬೀಸಿದ್ದಾರೆ.

ಡಿಸಿ ಮಂಜುನಾಥ್ ಲಂಚ ಪಡೆಯುತ್ತಿರುವ ಬಗ್ಗೆ ಹಲವು ಆರೋಪಗಳು ಕೇಳಿ ಬಂದಿತ್ತು. ಈ ಹಿನ್ನೆಲೆ ಇಂದು 5 ಲಕ್ಷ ಹಣ ಪಡೆಯುವ ವೇಳೆ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳ ಬಲೆಗೆ ತಹಶೀಲ್ದಾರ್ ಮಹೇಶ್, ಕೋರ್ಟ್ ಸಹಾಯಕ ಚಂದ್ರು ಸಿಕ್ಕಿಹಾಕಿಕೊಂಡಿದ್ದಾರೆ.
ಡಿಸಿ ಮಾರ್ಗದರ್ಶನದಲ್ಲಿ ಹಣ ಪಡೆದಿದ್ದಾರೆ ಎಂಬ ಆರೋಪವಿದೆ. ಆದರೆ ಆರೋಪಕ್ಕೆ ಸಾಕ್ಷ್ಯ ಇಲ್ಲ ಎಂದ ಎಸಿಬಿ ಅಧಿಕಾರಿಗಳು ಮಾಹಿತಿ ಹಂಚಿಕೊಂಡಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಮಂಜುನಾಥ್ ಎಸಿಬಿ ದಾಳಿ ನಡೆದಿದೆ. ಅಧಿಕಾರಿಗಳು ಪರಿಶೀಲನೆ ಮಾಡುತ್ತಿದ್ದಾರೆ. ನಾನು ಬೇರೆ ಕಾರ್ಯಕ್ರಮದಲ್ಲಿ ಇದ್ದೀನಿ ಎಂದು ಸ್ಪಷ್ಟಪಡಿಸಿದ್ದಾರೆ./////