ಕಾರಿನೊಳಗೆ ಪೆಟ್ರೋಲ್ ಸುರಿದುಕೊಂಡು ಯುವ ಜೋಡಿ ಆತ್ಮಹತ್ಯೆ

ಉಡುಪಿ: ಇಂಟರ್ವ್ಯೂಗೆ ಹೋಗಿ ಬರುವುದಾಗಿ ಹೇಳಿ ಯುವಕ ಜತೆ ಸುತ್ತಾಡಿ ಕೊನೆಗೆ ಕಾರಿನೊಳಗೆ ಪೆಟ್ರೋಲ್ ಸುರಿದುಕೊಂಡು ಯುವ ಜೋಡಿ ಆತ್ಮಹತ್ಯೆ ಘಟನೆ ಘಟನೆ ಮಂದಾರ್ತಿ ಸಮೀಪದ ಹೆಗ್ಗುಂಜ್ಜೆಯಲ್ಲಿ ಸಂಭವಿಸಿದೆ.
ಯಶವಂತ್ (23) ಮತ್ತು ಜ್ಯೋತಿ (23) ಆತ್ಮಹತ್ಯೆ ಮಾಡಿಕೊಂಡಿರುವ ಯುವ ಜೋಡಿ. ಇವರು ಬೆಂಗಳೂರಿನ ಆರ್.ಟಿ.ನಗರದವರು ಎಂದು ತಿಳಿದುಬಂದಿದೆ. ಮುಂಜಾನೆ 3 ಗಂಟೆ ಸುಮಾರಿಗೆ ಸುಡುತ್ತಿದ್ದ ಕಾರು ಪತ್ತೆಯಾಗಿದೆ. ಸ್ಥಳೀಯರು ಬೆಂಕಿ ನಂದಿಸಿದಾಗ ಕಾರಿನೊಳಗೆ ಯುವಕ, ಯುವತಿ ಶವ ಪತ್ತೆಯಾಗಿದೆ. ಕಳೆದ ಮೂರು ದಿನಗಳ ಹಿಂದೆ ಮೃತರು ಕಾಣೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿತ್ತು.
ಜ್ಯೋತಿ ಮನೆಗೆ ಬಂದಿಲ್ಲ. ಎಲ್ಲಾ ಕಡೆಗಳಲ್ಲಿ ಹುಡುಕಾಡಿದರೂ ಮಗಳು ಸಿಗಲಿಲ್ಲ ಎಂದು ಯುವತಿ ತಾಯಿ ರತ್ನಮ್ಮ ದೂರು ನೀಡಿದ್ದರು. ಯುವಕನ ತಂದೆ ವೆಂಕಟರಮಣ ರಾವ್, ಮಗ ಬೈಕ್ನಲ್ಲಿ ಟ್ಯಾಲಿಕ್ಲಾಸ್ಗೆ ಹೋಗಿ ಬರುವುದಾಗಿ ಹೇಳಿ ಹೋಗಿದ್ದ. ಆದರೆ ಇನ್ನು ಬಂದಿಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು.
ಮೃತರು ನಿನ್ನೆ (ಮೇ 21) ಮಂಗಳೂರಿಗೆ ಬಂದು ಹುಸೇನ್ ಎಂಬವರಿಂದ ಸ್ವಿಫ್ಟ್ ಕಾರು ಬಾಡಿಗೆ ಪಡೆದಿದ್ದರು. ಕಾರು ಬಾಡಿಗೆ ಪಡೆದು ಉಡುಪಿಗೆ ಬಂದಿದ್ದರು. ಕಳೆದ 3 ದಿನಗಳ ಹಿಂದೆ ಯಶವಂತ್ ಮತ್ತು ಜ್ಯೋತಿ ನಾಪತ್ತೆಯಾಗಿರುವ ಬಗ್ಗೆ ಬೆಂಗಳೂರಿನ ಹೆಬ್ಬಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸ್ವಿಫ್ಟ್ ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ.
ಮೃತರು ನಿನ್ನೆ ಕಾರು ಪಡೆದು ಮಂಗಳೂರಿನ ಬೀಚ್ನಲ್ಲಿ ಸುತ್ತಿದ್ದಾರೆ.//////