Belagavi News In Kannada | News Belgaum

ಮೃತ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಧಾರವಾಡ: ಧಾರವಾಡ ಜಿಲ್ಲೆಯ ಬಾಡ ಗ್ರಾಮದಲ್ಲಿ ಕ್ರೂಸರ್ ಮರಕ್ಕೆ ಡಿಕ್ಕಿ ಹೊಡೆದು ಸಂಭವಿಸಿದ್ದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಪರಿಹಾರ ಘೋಷಿಸಿದ್ದಾರೆ.

ಧಾರವಾಡದ ಬಾಡ ಗ್ರಾಮದ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟ 9 ಜನರ ಕುಟುಂಬಗಳಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮನವಿಯ ಮೇರೆಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿಗಳು ಟ್ವೀಟ್ ಮೂಲಕ ತಿಳಿಸಿದ್ದಾರೆ.

ಈ ಅಪಘಾತ ಅತ್ಯಂತ ದುರದೃಷ್ಟಕರವಾಗಿದ್ದು, ಮೃತಪಟ್ಟ ಎಲ್ಲರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಸಿಎಂ ಪ್ರಾರ್ಥಿಸಿದ್ದಾರೆ.//////