Belagavi News In Kannada | News Belgaum

ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ

ಶಿವಮೊಗ್ಗ: ಇಲ್ಲೊಬ್ಬ ಮಹಿಳೆ ಒಂದಲ್ಲ, ಎರಡಲ್ಲ, ಬರೋಬ್ಬರಿ ನಾಲ್ಕು ಮಕ್ಕಳಿಗೆ ಏಕಕಾಲದಲ್ಲಿ ಜನ್ಮ ನೀಡಿರುವ ಘಟನೆ  ಶಿವಮೊಗ್ಗದ ಸರ್ಜಿ ಆಸ್ಪತ್ರೆಯಲ್ಲಿ ನದೆದಿದೆ. ಮಹಿಳೆಯು ಏಕಕಾಲದಲ್ಲಿ ನಾಲ್ಕು ಮಕ್ಕಳಿಗೆ ಜನ್ಮನೀಡಿದ್ದು, ತಾಯಿ-ಮಕ್ಕಳು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಭದ್ರಾವತಿ ತಾಲೂಕಿನ ಕಡಸ ಗ್ರಾಮದ ಆರೀಫ್ ಅವರ ಪತ್ನಿ ಅಲ್ಮಾ ಬಾನು 4 ಮಕ್ಕಳಿಗೆ ಜನ್ಮ ನೀಡಿದ ತಾಯಿ. ಸೋಮವಾರ ಬೆಳಗ್ಗೆ ಅಲ್ಮಾಗೆ ಹೆರಿಗೆಯಾಗಿದ್ದು, 2 ಗಂಡು ಮತ್ತು 2 ಹೆಣ್ಣು ಮಗು ಜನಿಸಿವೆ.