ಪಿಜಿಯಲ್ಲಿಯೇ ನೇಣಿಗೆ ಕೊರಳೊಡ್ಡಿದ ಯುವತಿ

ಬೆಂಗಳೂರು: ಸ್ಪರ್ಧಾತ್ಮಕ ಪರೀಕ್ಷೆಗಾಗಿ ಸಿದ್ಧತೆ ನಡೆಸಿದ್ದ ಯುವತಿಯೊಬ್ಬಳು ಪಿಜಿಯಲ್ಲಿಯೇ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಗೋವಿಂದರಾಜನಗರದಲ್ಲಿ ನಡೆದಿದೆ.
ಇಲ್ಲಿನ ಚೌಡೇಶ್ವರಿ ಪಿಜಿಯಲ್ಲಿ ವಾಸವಾಗಿದ್ದ 23 ವರ್ಷದ ಪವಿತ್ರಾ ಎಂಬ ಯುವತಿ ನೇಣಿಗೆ ಕೊರಳೊಡ್ಡಿದ್ದಾಳೆ. ಪಾವಗಡ ಮೂಲದ ಪವಿತ್ರಾ ಎಂಬಿಎ ಮುಗಿಸಿ ಸ್ಪರ್ಧಾತ್ಮಕ ಪರೀಕ್ಷೆಗಾಗಿ ಓದುತ್ತಿದ್ದರು. ಇದೀಗ ಏಕಾಏಕಿ ಆತ್ಮಹತ್ಯೆಗೆ ಶರಣಾಗಿರುವುದು ಅಚ್ಚರಿಗೆ ಕಾರಣವಾಗಿದೆ. ಗೋವಿಂದರಾಜನಗರ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ./////