Belagavi News In Kannada | News Belgaum

ಬೆಳಗಾವಿ ಕನ್ನಡಿಗರ ತಂಟೆಗೆ ಬಂದ್ರೆ ಹುಷಾರ್: ಎಂಇಎಸ್‌ ಪುಂಡರಿಗೆ ಸಿಎಂ ಎಚ್ಚರಿಕೆ

ಬೆಂಗಳೂರು: ಕನ್ನಡಿಗರ ತಂಟೆಗೆ ಬರದಂತೆ ಮಹಾರಾಷ್ಟ್ರ ಏಕೀಕರಣ ಸಮಿತಿಯ ಪುಂಡರಿಗೆ ಸಿಎಂ ಬೊಮ್ಮಾಯಿ ಖಡಕ್ ವಾರ್ನಿಂಗ್ ನೀಡಿದ್ದಾರೆ.

ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾತಾಡಿದ ಸಿಎಂ ಬೊಮ್ಮಾಯಿ, ಬೆಳಗಾವಿಯಲ್ಲಿ ಮತ್ತೆ ಎಂಇಎಸ್ ಪುಂಡಾಟಿಕೆ ಮೆರೆದಿದೆ. ಇದನ್ನು ಸರ್ಕಾರ ತೀವ್ರವಾಗಿ ಖಂಡಿಸುತ್ತದೆ. ಈಗಾಗಲೇ ಬೆಳಗಾವಿ ಮದುವೆಯಲ್ಲಿ ಪುಂಡಾಟ ತೋರಿದವರ ವಿರುದ್ಧ ಪೊಲೀಸರು ಸೂಕ್ತ ಕ್ರಮ ತೆಗೆದುಕೊಳ್ಳುತ್ತಿದ್ದಾರೆ.

ಆದರೆ ಎಂಇಎಸ್ ನಮ್ಮನೆಲದಲ್ಲಿ ಕಾನೂನನ್ನು ಕೈಗೆ ತೆಗೆದುಕೊಂಡರೆ ಸರ್ಕಾರ ಸಹಿಸುವುದಿಲ್ಲ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.

ಬೆಳಗಾವಿಯಲ್ಲಿ ನಡೆದ ಮದುವೆಯೊಂದರಲ್ಲಿ ಕನ್ನಡ ಗೀತೆಗಳ ಗಾಯನ ನಡೆಯಿತೆಂಬ ಕಾರಣಕ್ಕೆ ಎಂಇಎಸ್ ಕಾರ್ಯಕರ್ತರು ಮದುವೆಯಲ್ಲಿ ಭಾಗವಹಿಸಿದ್ದವರ ಮೇಲೆ ದಾಳಿ ಮಾಡಿ ಹಲ್ಲೆ ನಡೆಸಿದ್ರು. ಮದುವೆ ಆಗಲಿದ್ದ ವರನಿಗೂ ಹಲ್ಲೆ ಮಾಡಿದ್ದಾರೆ. ಈ ಪ್ರಕರಣದಲ್ಲಿ ಸದ್ಯ 10 ಮಂದಿ ಎಂಇಎಸ್ ಆರೋಪಿಗಳ ಬಂಧನ ಆಗಿದೆ ಅಂತ ಹೇಳಿದರು.////