Belagavi News In Kannada | News Belgaum

ಕೋಟ್ಟಾ-2003 ಕಾಯ್ದೆಯಡಿ ದಾಳಿ : ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತುಗಳ ನಿಷೇದ

ಬೆಳಗಾವಿ: ಜಿಲ್ಲಾ ತಂಬಾಕು ನಿಯಂತ್ರಣಾಧಿಕಾಗಳ ಮಾರ್ಗದರ್ಶನದಡಿಯಲ್ಲಿ ಶುಕ್ರವಾರ(ಜೂನ್ 3) ನಗರದ ಅಜಮ್ ನಗರದಲ್ಲಿ ಕೋಟ್ಪಾ-2003 ಕಾಯ್ದೆ ವಿರುದ್ದವಾಗಿ ಸಾರ್ವಜನಿಕ ಸ್ಥಳಗಳಲ್ಲಿ ದೂಮಪಾನ ಮಾಡುವವರ ಮೇಲೆ ಹಾಗೂ ಮಾರಾಟ ಮಾಡುವ ಅಂಗಡಿಗಳ ಮೇಲೆ ದಾಳಿ ಮಾಡಲಾಯಿತು.

ನೇರ ಪರೋಕ್ಷವಾಗಿ ತಂಬಾಕು ಜಾಹಿರಾತು ಪ್ರದರ್ಶನ, ಶೈಕ್ಷಣಿಕ ಆವರಣದ 100 ಮೀಟರ ಅಂತರದೋಳಗೆ ತಂಬಾಕು ಉತ್ಪನ್ನ ಮಾರಾಟ ಮಾಡುವ ಅಂಗಡಿ ಮಾಲಿಕರಿಗೆ ಜಾಗೃತಿ ಮೂಡಿಸಿ ಹಾಗು ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳನ್ನು ಸಾರ್ವಜನಿಕರಿಗೆ ತಿಳಿಸಿಲಾಯಿತು.

ಕೋಟ್ಪಾ-2003 ಕಾಯ್ದೆ ಅಡಿಯಲ್ಲಿ ಒಟ್ಟು 47 ಪ್ರಕರಣಗಳನ್ನು ದಾಖಲಿಸಿ ದಂಡ ವಿಧಿಸಲಾಯಿತು ಹಾಗೂ ಸೆಕ್ಷನ್-4 ನಾಮಫಲಕವನ್ನು ವಿತರಿಸಲಾಯಿತು. ಸಾರ್ವಜನಿಕರಲ್ಲಿ ತಂಬಾಕು ಸೇವನೆಯ ದುಷ್ಪರೀಣಾಮದ ಕುರಿತು ಅರಿವು ಮೂಡಿಸಲಾಯಿತು.

ದಾಳಿಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದಿಂದ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳಾದ ಡಾ. ಬಿ.ಎನ್. ತುಕ್ಕಾರ, ಜಿಲ್ಲಾ ಸಲಹೆಗಾರರಾದ ಡಾ.ಶ್ವೇತಾ ಪಾಟೀಲ, ರಾಜ್ಯ ತಂಬಾಕು ನಿಯಂತ್ರಣ ಘಟಕದ ಮಹಾಂತೇಶ ಉಳ್ಳಾಗಡ್ಡಿ, ಸಮಾಜ ಕಾರ್ಯಕತೆ ಕವಿತಾ ರಾಜನ್ನವರ, ಆರೋಗ್ಯ ಇಲಾಖೆ ಸಿಬ್ಬಂದಿ ಉದಯ ಹೀರೆಮಠ ಹಾಗೂ ಪೊಲೀಸ ಸಿಬಂದ್ದಿಗಳು ಶಿವಾನಂದ ಗುಡೇದ ದಾಳಿಯಲ್ಲಿ ಉಪಸ್ಥಿತರಿದ್ದರು./////