Belagavi News In Kannada | News Belgaum

ದ್ವಿಚಕ್ರ ವಾಹನಕ್ಕೆ ಅಪರಿಚಿತ ವಾಹನ ಡಿಕ್ಕಿ: ಸವದತ್ತಿಯ ಯೋಧ ಸಾವು

ಬೆಳಗಾವಿ:  ದ್ವಿಚಕ್ರ ವಾಹನಕ್ಕೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಯೋಧನೊಬ್ಬ ಮೃತಪಟ್ಟಿರುವ ಘಟನೆ ಬೆಳಗಾವಿ ಸುವರ್ಣ ವಿಧಾನಸೌಧದ ಬಳಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಸವದತ್ತಿ ತಾಲೂಕಿನ ಹೊಸೂರು ಗ್ರಾಮದ ಪ್ರಕಾಶ ಸಂಗೊಳ್ಳಿ ( 29) ಮೃತಪಟ್ಟ ಯೋಧ. ಈತನು ಬೆಳಗಾವಿಯ ಎಂಎಲ್ಐಆರ್ ಸಿಯಲ್ಲಿ ಕೆಲಸ ಮಾಡುತ್ತಿದ್ದ,  ಭಾನುವಾರ ಪತ್ನಿಯ ಸೀಮಂತ ಕಾರ್ಯಕ್ರಮವಿತ್ತು. ಹಾಗಾಗಿ ರಜೆ ಹಾಕಿ ಊರಿಗೆ ತೆರಳುತ್ತಿದ್ದಸಂದರ್ಭದಲ್ಲಿ ಯೋಧನ ದ್ವಿಚಕ್ರ ವಾಹನಕ್ಕೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಹೋಗಿದೆ. ಯೋಧ ಪ್ರಕಾಶ ಸ್ಥಳದಲ್ಲೇ ಸಾವಿಗೀಡಾದರು. ಶುಕ್ರವಾರ ಬೆಳಗ್ಗೆ ಹೊಸೂರಿನಲ್ಲಿ ಅಂತ್ಯಸಂಸ್ಕಾರ ನೆರವೇರಿತು.  ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.//////