Belagavi News In Kannada | News Belgaum

ಯಾದಗಿರಿ ನೂತನ ಜಿಲ್ಲಾಧಿಕಾರಿಯಾಗಿ ಶ್ರೀಮತಿ ಸ್ನೇಹಲ್ .ಆರ್ ಅಧಿಕಾರ ಸ್ವೀಕಾರ

ಯಾದಗಿರಿ ನೂತನ ಜಿಲ್ಲಾಧಿಕಾರಿಯಾಗಿ ಶ್ರೀಮತಿ ಸ್ನೇಹಲ್ .ಆರ್ ಅಧಿಕಾರ ಸ್ವೀಕಾರ

ಯಾದಗಿರಿ:ಜೂ:4 (ಬೆಳಗಾವಿ ವರದಿ ):ಯಾದಗಿರಿ ನೂತನ ಜಿಲ್ಲಾಧಿಕಾರಿಯಾಗಿ ಶ್ರೀಮತಿ ಸ್ನೇಹಲ್.ಆರ್ ಅವರು ಇಂದು ಅಧಿಕಾರವಹಿಸಿಕೊಂಡಿದ್ದು, ಈ ಹಿಂದಿನ ಜಿಲ್ಲಾಧಿಕಾರಿಗಳಾಗಿದ್ದ ಶ್ರೀಮತಿ ಡಾ.ರಾಗಪ್ರಿಯಾ ರಯಮಾನೆ ಅವರು ಅಧಿಕಾರ ಹಸ್ತಾಂತರಿಸಿದರು.

 

ನೂತನ ಜಿಲ್ಲಾಧಿಕಾರಿಗಳಾದ ಶ್ರೀಮತಿ ಸ್ನೇಹಲ್ .ರಯಮಾನೆ ಅವರು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಮದವರಾದ ಇವರು 2013 ನೇ ಐಎಎಸ್ ಬ್ಯಾಚ್ ನ ಅಧಿಕಾರಿಯಾಗಿದ್ದಾರೆ. 2015 ರಲ್ಲಿ ಚಿಕ್ಕ ಮಂಗಳೂರು ಸಹಾಯಕ ಆಯುಕ್ತರಾಗಿ, ಧಾರವಾಡ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾಗಿ ,ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಲ್ಲೆಗಳ ವ್ಯಾಪ್ತಿ ಹೊಂದಿರುವ ಮೆಸ್ಕಾಂ ನ ಎಂ ಡಿ ಯಾಗಿ ಪಿಯುಸಿ ವಿಭಾಗ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದು,ಇದೀಗ ಯಾದಗಿರಿ ಜಿಲ್ಲಾಧಿಕಾರಿಗಳಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.