ಬಹು ನಿರೀಕ್ಷಿತ ಕಬ್ಜ ಚಿತ್ರಕ್ಕೆ ಏಳು ಭಾಷೆಗಳಲ್ಲಿ ಡಬ್ಬಿಂಗ್ ಶುರು

ಬೆಂಗಳೂರು: ಆರ್.ಚಂದ್ರು ನಿರ್ದೇಶನದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಬಹು ನಿರೀಕ್ಷಿತ “ಕಬ್ಜ” ಚಿತ್ರ ಕನ್ನಡ ಸೇರಿದಂತೆ ಏಳು ಭಾಷೆಗಳಲ್ಲಿ ನಿರ್ಮಾಣವಾಗುತ್ತಿದೆ.
ಸಿನಿಮಾದ ಬಹುತೇಕ ಶೂಟಿಂಗ್ ಮುಗಿಸಿರುವ ನಿರ್ದೇಶಕರು ನಿನ್ನೆಯಿಂದ ಡಬ್ಬಿಂಗ್ ಕಾರ್ಯ ಶುರು ಮಾಡಿದ್ದಾರೆ. ಒಟ್ಟು ಏಳು ಭಾಷೆಗಳಲ್ಲಿ ಈ ಸಿನಿಮಾ ಡಬ್ ಆಗಲಿದೆ. 1940ರ ಕಾಲಘಟ್ಟದ ಕಥೆ ಅದ್ಭುತವಾಗಿದೆ. ಮೋಷನ್ ಪೋಸ್ಟರ್ ಹಾಗೂ ಸ್ಟಿಲ್ಸ್ ಜನಮನಸೂರೆಗೊಂಡಿದೆ. ಮೇಕಿಂಗ್ ತುಣುಕು ನೋಡಿದವರಂತು ಫಿದಾ ಆಗಿದ್ದಾರೆ. ಭಾರತ ದೇಶವೇ ತಿರುಗಿ ನೋಡುವ ಸಿನಿಮಾ ಇದಾಗಲಿದೆ ಎನ್ನುತ್ತಾರೆ ಚಂದ್ರು.
ಕಬ್ಬ ಚಿತ್ರ ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಮೈಲಿಗಲ್ಲಾಗಲಿ ಎಂಬುದೇ ಕನ್ನಡಿಗರ ಆಶಯ. ಚಿತ್ರದ. ಟೀಸರ್ ನೋಡುವ ಕಾತುರದಲ್ಲಿದ್ದೇವೆ. ಆದಷ್ಟು ಬೇಗ ಬಿಡುಗಡೆ ಮಾಡಿ ಎಂದು ಸಿನಿಪ್ರೇಕ್ಷಕರು ಚಂದ್ರು ಅವರನ್ನು ಒತ್ತಾಯಿಸುತ್ತಿದ್ದಾರಂತೆ ಅಭಿಮಾನಿಗಳು../////