ಸೋನಿಯಾ-ರಾಹುಲ್ ಗಾಂಧಿಗೆ ಇಡಿ ನೋಟಿಸ್: ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ

ಬೆಂಗಳೂರು: ಕಾಂಗ್ರೆಸ್ ನಾಯಕಿ ಸೋನಿಯಗಾಂಧಿ ಹಾಗೂ ರಾಹುಲ್ ಗಾಂಧಿಗೆ ಇಡಿ ಸಮನ್ಸ್ ನೀಡಿದ್ದಕ್ಕೆ ವಿರೋಧಿಸಿ ಕರ್ನಾಟಕ ಕಾಂಗ್ರೆಸ್ ನಾಯಕರು ಇಂದು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಗೆ ಇಡಿ ಸಮನ್ಸ್ ನೀಡಿದ್ದಕ್ಕೆ ವಿರೋಧ ವ್ಯಕ್ತಪಡಿಸಿ ಕಾಂಗ್ರೆಸ್ ಕಾರ್ಯಕರ್ತರು ಇಡಿ ಕಚೇರಿಗೆ ಮುತ್ತಿಗೆ ಹಾಕುವ ನಿಟ್ಟಿನಲ್ಲಿ ಆಕ್ರೋಶ ವ್ಯಕ್ತಪಡಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಿದ್ದಾರೆ.
ಕಾಂಗ್ರೆಸ್ ಪ್ರತಿಭಟನೆ ವೇಳೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬಿಜೆಪಿ ದ್ವೇಷದ ರಾಜಕಾರಣ ಮಾಡುತ್ತಿದೆ. ಉದ್ದೇಶಪೂರ್ವಕವಾಗಿ ನೋಟಿಸ್ ಕೊಟ್ಟು ಕಿರುಕುಳ ನೀಡುತ್ತಿದ್ದಾರೆ. ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಜೊತೆಗೆ ನಾವಿದ್ದೇವೆ. ದೇಶದ ಜನರಿದ್ದಾರೆ ಎಂದು ಕಿಡಿಕಾರಿದ್ದಾರೆ. ಪ್ರತಿಭಾನೆಯಲ್ಲು ನೂರಾರು ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು./////