Belagavi News In Kannada | News Belgaum

ಮೂವರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ

ಮಧ್ಯಪ್ರದೇಶ: ಆಳದ ಬಾವಿಯಲ್ಲಿ ಸ್ನಾನ ಮಾಡುತ್ತಿದ್ದ ಮೂವರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ  ಸುಲ್ತಂಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗೂಖಾರ್ ಗ್ರಾಮದಲ್ಲಿ ನಡೆದಿದೆ.

ಮೃತರು 12ರಿಂದ 16 ವರ್ಷದೊಳಗಿನ ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಕರು ಸ್ನಾನಕ್ಕೆಂದು ಬಾವಿಗೆ ಇಳಿದಿದ್ದಾರೆ. ಆದರೆ ತುಂಟಾಟ ವೇಳೆ 35 ಅಡಿ ಆಳದ ನೀರಿಗೆ ಬಿದ್ದು ಬಬ್ಬರನೊಬ್ಬರು ಹಿಡಿದುಕೊಂಡು ಮುಳುಗಿ ಸಾವನ್ನಪ್ಪಿದ್ದಾರೆ. ಸಂಜೆಯಾದರೂ ಅವರು ತಮ್ಮ ಮನೆಗಳನ್ನು ತಲುಪದಿದ್ದಾಗ, ಅವರ ಕುಟುಂಬ ಸದಸ್ಯರು ಹುಡುಕಾಟ ಆರಂಭಿಸಿದಾಗ ಬಾವಿಯ ಬಳಿ ಅವರ ಬೂಟುಗಳು ಮತ್ತು ಬಟ್ಟೆಗಳು ಪತ್ತೆಯಾಗಿವೆ ಎಂದು ಸುಲ್ತಂಗಂಜ್ ಪೊಲೀಸ್ ಠಾಣೆಯ ಪ್ರಭಾರಿ ವಿಮಲೇಶ್ ರೈ ತಿಳಿಸಿದ್ದಾರೆ.
ನಂತರ ಕುಟುಂಬ ಸದಸ್ಯರು ಮತ್ತು ಇತರ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದರು. ನಂತರ ಶವಗಳನ್ನು ಬಾವಿಯಿಂದ ಹೊರತೆಗೆಯಲಾಯಿತು ಎಂದು ಅವರು ಹೇಳಿದರು. ಘಟನೆಯ ಕುರಿತು ಪೊಲೀಸರು ತನಿಖೆ ಮುಂದುವರೆದಿದೆ./////