Belagavi News In Kannada | News Belgaum

ರಸ್ತೆಗಳಲ್ಲಿ ಟೈಯರ್‌ಗಳಿಗೆ ಬೆಂಕಿ ಹಚ್ಚಿ ಕಾಂಗ್ರೆಸ್ ಆಕ್ರೋಶ

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರನ್ನು ಇಡಿ ವಿಚಾರಣೆ ನಡೆಸುತ್ತಿರುವ ಕ್ರಮವನ್ನು ಖಂಡಿಸಿ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನೆ ತಾರಕ್ಕೇರಿದೆ. ಇಂದು ಒಂದು ಕಡೆ ಟಯರ್‍ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಇಂದು ರಾಷ್ಟ್ರ ರಾಜಧಾನಿ ದೆಹಲಿ ಅಕ್ಷರ ಸಹ ರಣಾಂಗಣವಾಗಿ ಬದಲಾಗಿದೆ. ಎಐಸಿಸಿ ಮಾಜಿ ಅಧ್ಯಕ್ಷ, ಸಂಸದ ರಾಹುಲ್ ಗಾಂಧಿ ಅವರನ್ನು ಇಡಿ ವಿಚಾರಣೆ ನಡೆಸುತ್ತಿದ್ದು ಇದನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ನಡೆಸುತ್ತಿರುವ ಪ್ರತಿಭಟನೆ ಇಂದು ಉಗ್ರ ಸ್ವರೂಪ ಪಡೆದುಕೊಂಡಿದೆ.
ಮೂರನೇ ದಿನವಾದ ಇಂದು ಕಾಂಗ್ರೆಸ್ ನಾಯಕರು ಎಐಸಿಸಿ ಕಚೇರಿಯಿಂದ ಇಡಿ ಕಚೇರಿವರೆಗೂ ಪ್ರತಿಭಟನೆ ನಡೆಸಲು ಪ್ರಯತ್ನಿಸಿರು. 144 ಸೆಕ್ಷನ್ ಜಾರಿ ಹಿನ್ನಲೆ ಪ್ರತಿಭಟನೆ ಆರಂಭವಾಗುತ್ತಿದ್ದಂತೆ ಅದನ್ನಯ ತಡೆಯಲು ದೆಹಲಿ ಪೊಲೀಸರು ಪ್ರಯತ್ನಿಸಿದರು. ಈ ವೇಳೆ ದೆಹಲಿ ಪೊಲೀಸ್ ಕಾಂಗ್ರೆಸ್ ಕಾರ್ಯಕರ್ತರ ನಡುವೆ ದೊಡ್ಡ ಸಂಘರ್ಷವೇ ನಡೆಯಿತು.
ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಸಂಸದ ಡಿ.ಕೆ ಸುರೇಶ್, ಯೂಥ್ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ ಶ್ರೀನಿವಾಸ್ ಅವರನ್ನ ಪೊಲೀಸರು ಅನಾಮತ್ತಾಗಿ ಕೈ ಕಾಲು ಹಿಡಿದು ಹೊತ್ತಿಕೊಂಡು ಹೋಗಿ ಪೊಲೀಸ್ ವಾಹನದಲ್ಲಿ ತುಂಬಿಸಿದ್ದಾರೆ. ಪ್ರತಿಭಟನೆ ವೇಳೆ ಡಿ.ಕೆ ಸುರೇಶ್ ದೆಹಲಿ ಪೊಲೀಸರ ಜೊತೆಗೆ ವಾಗ್ವಾದ ನಡೆಸಿದರು. ಪ್ರತಿಭಟನೆ ನಡೆಸಲು ಅವಕಾಶ ಕೇಳಿದರು. ಇದಕ್ಕೆ ದೆಹಲಿ ಪೊಲೀಸರು ವಿರೋಧ ವ್ಯಕ್ತಪಡಿಸಿದರು. ಈ ವೇಳೆ ಏರ್ಪಟ್ಟ ಸಂಘರ್ಷದಲ್ಲಿ ಪೊಲೀಸರು ಡಿ.ಕೆ ಸುರೇಶ್ ಅವರನ್ನು ವಶಕ್ಕೆ ಪಡೆದುಕೊಂಡರು.
ಯೂಥ್ ಕಾಂಗ್ರೆಸ್ ಕಾರ್ಯಕರ್ತರು ಇಡಿ ಕಚೇರಿಯ ಕೂಗಳತೆ ದೂರದಲ್ಲಿರುವ ಡಾ.ಎಪಿಜೆ ಅಬ್ದುಲ್ ಕಲಾಂ ರಸ್ತೆಯಲ್ಲಿ ಟಯರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಇದರಿಂದ ಟ್ರಾಫಿಕ್ ಜಾಮ್ ಆಯ್ತು, ಉರಿ ಬಿಸಿಲಿನಲ್ಲಿ ನಿಂತ ಜನರು ಕಾಂಗ್ರೆಸ್ ಕಾರ್ಯಕರ್ತರಿಗೆ ಹಿಡಿ ಶಾಪ ಹಾಕಿದರು. ಪ್ರತಿಭಟನೆ ಉಗ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಪರಿಸ್ಥಿತಿ ನಿಯಂತ್ರಣಕ್ಕೆ ತರಲು ದೆಹಲಿ ಪೊಲೀಸರು ಕಾಂಗ್ರೆಸ್ ಕಚೇರಿ ಒಳಗೆ ನುಗ್ಗಿದರು. ಪ್ರತಿಭಟನೆ ನಡೆಸುತ್ತಿದ್ದ ಕಾರ್ಯಕರ್ತರನ್ನು ಬಂಧಿಸಿದರು. ಪೊಲೀಸ್ ಮಾಹಿತಿಗಳ ಪ್ರಕಾರ ಇಂದು ಒಂದೇ ದಿನ 150 ಬಂಧಿಸಿದ್ದಾರೆ.
ಕಾಂಗ್ರೆಸ್ ಕಚೇರಿಗೆ ಪೊಲೀಸರು ನುಗ್ಗಿದ ಕ್ರಮವನ್ನು ಕಾಂಗ್ರೆಸ್ ನಾಯಕರು ತೀವ್ರವಾಗಿ ವಿರೋಧಿಸಿದ್ದಾರೆ. ಪೊಲೀಸ್ ಗೂಂಡಾಗಳನ್ನು ಕಾಂಗ್ರೆಸ್ ಕಚೇರಿಗೆ ಛೂ ಬಿಟ್ಟಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಮೋದಿ ಹರಿಹಾಯ್ದರು.//////