Belagavi News In Kannada | News Belgaum

ನಾಳೆ ಬೆಳಗಾವಿಯಲ್ಲಿ ಕಾಂಗ್ರೆಸ್‌ ಬೃಹತ್‌ ಪ್ರತಿಭಟನೆ

ಬೆಳಗಾವಿ:ಬಿಜೆಪಿ ನೇತೃತ್ವದ ಬಿಜೆಪಿ ಸರ್ಕಾರವು ಸಾಂವಿಧಾನಿಕ ಸಂಸ್ಥೆಯಾದ ಇಡಿಯನ್ನು ದುರ್ಬಳಕೆ ಮಾಡಿಕೊಂಡು ಕೃತಕವಾಗಿ ಸೃಷ್ಟಿಸಿದ ವಿಷಯದಲ್ಲಿ ತನಿಖೆಯನ್ನು ಕೈಗೆತ್ತಿಕೊಂಡು ಕಾಂಗ್ರೆಸ್‌ ಪಕ್ಷದ ಗೌರವಾನ್ವಿತ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಭೂತಪೂರ್ವ ಅಧ್ಯಕ್ಷ  ರಾಹುಲ್ ಗಾಂಧಿ ಅವರಿಗೆ ಸಮನ್ಸ್ ನೀಡಿ ವಿನಾಕಾರಣ ಕಿರುಕುಳ ನೀಡುತ್ತಿರುವ ಕ್ರಮವನ್ನು ಖಂಡಿಸಿ ಜು. 17ರಂದು 11: 00 ಗಂಟೆಗೆ ಬೆಳಗಾವಿ ಗ್ರಾಮೀಣ ಹಾಗೂ ಬೆಳಗಾವಿ ನಗರ ಜಿಲ್ಲಾ ಕಾಂಗ್ರೆಸ್ ಸಮಿತಿಯ ವತಿಯಿಂದ ಬೆಳಗಾವಿ ಕಾಂಗ್ರೆಸ್ ಭವನದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಮಾನ್ಯ ರಾಷ್ಟ್ರಪತಿಗೆ ಮನವಿ ಸಲ್ಲಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಆದ ಕಾರಣ ಕಾಂಗ್ರೆಸ್‌ ಪಕ್ಷದ ಶಾಸಕರು, ಮಾಜಿ ಶಾಸಕರು, ವಿಧಾನ ಪರಿಷತ್ ಸದಸ್ಯರು ಚುನಾಯಿತ ಜನಪ್ರತಿನಿಧಿಗಳು, ಕಾಂಗ್ರೆಸ್‌ ಮುಖಂಡರು, ಪಕ್ಷದ ಪದಾಧಿಕಾರಿಗಳು, ಮುಂಚೂಣಿ ಘಟಕಗಳ ಸರ್ವ ಸದಸ್ಯರು ಹಾಗೂ ಕಾರ್ಯಕರ್ತರು ಈ ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಫಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಬೆಳಗಾವಿ ಗ್ರಾಮೀಣ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ ಹಾಗೂ ನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಾಜು ಸೇಠ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.//////