Belagavi News In Kannada | News Belgaum

ನಾಳೆ ಪಿಯು ಫಲಿತಾಂಶ ಪ್ರಕಟ

ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶವನ್ನು ನಾಳೆ (ಜೂ.18) ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ತಿಳಿಸಿದ್ದಾರೆ.

ಈ ಕುರಿತು ಬಿ.ಸಿ. ನಾಗೇಶ್‌ ಅವರು ಟ್ವೀಟ್‌ ಮಾಡಿದ್ದು, ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ ಪ್ರಕಟಿಸಲಾಗುತ್ತದೆ. ವಿದ್ಯಾರ್ಥಿಗಳಿಗೆ ಶುಭಾಶಯಗಳು ಎಂದು ತಿಳಿಸಿದ್ದಾರೆ.

ಕಳೆದ ಏಪ್ರಿಲ್-ಮೇ ತಿಂಗಳಲ್ಲಿ ನಡೆದಿದ್ದ ದ್ವೀತಿಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ ಪ್ರಕಟಿಸಲಾಗುವುದು. ಸುಮಾರು 8.50 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಶಿಕ್ಷಣ ಸಚಿವರ ಸುದ್ದಿಗೋಷ್ಠಿ ಬಳಿಕ ಇಲಾಖೆ ವೆಬ್‌ಸೈಟ್‌ನಲ್ಲಿ ಫಲಿತಾಂಶ ಲಭ್ಯವಾಗಲಿದೆ.//////