Belagavi News In Kannada | News Belgaum

ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಸೇವೆ

ಬೆಂಗಳೂರು: ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಸೇವೆ ಕಲ್ಪಿಸಲಾಗುವುದು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಸಿಟಿ) ತಿಳಿಸಿದೆ.
ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಗಳು ಜೂನ್ 27 ರಿಂದ ಜುಲೈ 4ರ ವರೆಗೆ ನಡೆಯಲಿದೆ. ಪರೀಕ್ಷೆ ಪ್ರವೇಶ ಪತ್ರ ತೋರಿಸಿ ವಿದ್ಯಾರ್ಥಿಗಳು ಬಸ್‌ನಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದು ಎಂದು ಕೆಎಸ್‌ಆರ್‌ಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.
ಎಸ್ಸೆಸ್ಸೆಲ್ಸಿ  ಪರೀಕ್ಷೆ ಫಲಿತಾಂಶ ಮೇ 19 ರಂದು ಪ್ರಕಟವಾಗಿತ್ತು. ಈ ಬಾರಿ ಪರೀಕ್ಷೆಯಲ್ಲಿ ಶೇ. 85.63ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರು. ಈ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಜೂ.27 ರಿಂದ ಪೂರಕ ಪರೀಕ್ಷೆ ನಡೆಯಲಿದೆ./////