Belagavi News In Kannada | News Belgaum

ಕರಾವಳಿ ಭಾಗದಲ್ಲಿ ಬಾರೀ ಮಳೆ : ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು : ಕರ್ನಾಟಕದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದಲೂ ಭಾರೀ ಮಳೆ ಸುರಿಯುತ್ತಿದೆ. ಮಳೆ ಇನ್ನೂ ನಾಲ್ಕು ದಿನಗಳ ಕಾಲ ಮುಂದುವರಿಯಲಿದೆ. ಅದ್ರಲ್ಲೂ ಉತ್ತರ ಒಳನಾಡು, ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಕರ್ನಾಟಕದಲ್ಲಿ ಮುಂದಿನ 24 ಗಂಟೆಗಳ ಅವಧಿಯಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುವ ಸಾಧ್ಯತೆಯಿದೆ. ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ತಗ್ಗು ಪ್ರದೇಶದಲ್ಲಿನ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆಯನ್ನು ನೀಡಲಾಗಿದೆ.

ರಾಜ್ಯದ ಮಲೆನಾಡು ಜಿಲ್ಲೆಗಳಾದ ಹಾಸನ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಹಾಗೂ ರಾಜ್ಯದ ಮೈಸೂರು, ಮಂಡ್ಯ, ರಾಮನಗರ, ಚಿತ್ರದುರ್ಗ, ಚಾಮರಾಜನಗರ, ಬಾಗಲಕೋಟೆ, ಬೆಳಗಾವಿ, ಬೀದರ್‌ ಹಾಗೂ ಬೆಂಗಳೂರು ಜಿಲ್ಲೆಗಳಲ್ಲಿಯೂ ಜೂನ್‌ ೨೪ರ ವರೆಗೆ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಮುಂಗಾರು ಮಾರುತಗಳು ಉತ್ತರ ಪ್ರದೇಶಕ್ಕೆ ಪ್ರವೇಶವಾಗುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ, ಗೋವಾ, ಪಶ್ಚಿಮ ಬಂಗಾಲ, ಒಡಿಶಾ, ಹಿಮಾಚಲ ಪ್ರದೇಶ, ಜಾರ್ಖಂಡ್‌, ಸಿಕ್ಕಿಂ, ಛತ್ತೀಸ್‌ಗಢ, ಗುಜರಾತ್‌, ಆಂಧ್ರಪ್ರದೇಶ, ತೆಲಂಗಾಣ, ಕೇರಳ ಹಾಗೂ ಮಾಹೆಯಲ್ಲಿ ಭಾರಿ ಪ್ರಮಾಣದಲ್ಲಿ ಮಳೆ ಸುರಿಯಲಿದೆ ಎನ್ನಲಾಗುತ್ತಿದೆ.

ನೈಋತ್ಯ ಮಾನ್ಸೂನ್ ತನ್ನ ರಾಜಧಾನಿ ಮುಂಬೈ ಸೇರಿದಂತೆ ಮಹಾರಾಷ್ಟ್ರದ ಹಲವಾರು ಭಾಗಗಳಿಗೆ ಆಗಮಿಸಿ ಒಂದು ವಾರದ ನಂತರ, ಈ ಅವಧಿಯ ಬಹುಪಾಲು ರಾಜ್ಯಾದ್ಯಂತ ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಆದರೆ ಇಂದಿನಿಂದ ಮಳೆ ಮತ್ತೆ ಆರ್ಭಟಿಸುವ ಸಾಧ್ಯತೆಯಿದೆ. ಇನ್ನು ಭಾರತೀಯ ಹವಾಮಾನ ಇಲಾಖೆ (Iಒಆ) ಪ್ರಕಾರ, ಪಶ್ಚಿಮ ಕರಾವಳಿಯಲ್ಲಿ ಬೀಸುವ ಪಶ್ಚಿಮ ಮಾರುತಗಳು ಮತ್ತು ಉತ್ತರ ಒಳಗಿನ ಕರ್ನಾಟಕದಿಂದ ದಕ್ಷಿಣ ತಮಿಳುನಾಡಿನವರೆಗೆ ಟ್ರಫ್ ಒಟ್ಟಾರೆಯಾಗಿ ಮಹಾರಾಷ್ಟ್ರ ಮತ್ತು ಅದರ ನೆರೆಯ ರಾಜ್ಯಗಳಾದ್ಯಂತ ಜೂನ್ 22 ರವರೆಗೆ ಮುಂದಿನ ಐದು ದಿನಗಳವರೆಗೆ ಭಾರೀ ಮಳೆಯನ್ನು ಉಂಟುಮಾಡುತ್ತದೆ.