ಬೆಳಗಾವಿಯಲ್ಲಿ170ಕ್ಕೂ ಹೆಚ್ಚು ಯುವಕರು ಪೊಲೀಸರ ವಶಕ್ಕೆ

ಬೆಳಗಾವಿ: ಬೆಳಗಾವಿ ಬಂದ್ಗೆ ಕರೆ ನೀಡಿದ್ದ ಹಿನ್ನೆಲೆಯಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಬಂದಿದ್ದ 170 ಯುವಕರನ್ನು ಪೊಲೀಸರು ವಶಕ್ಕೆ ಪಡೆದು ಕೆಎಸ್ಆರ್ಪಿ ತರಬೇತಿ ಶಾಲೆಯಲ್ಲಿ ಇರಿಸಿದ್ದಾರೆ.
ಅಗ್ನಿಪಥ್ ಯೋಜನೆ ವಿರೋಧಿಸಿ ಬೆಳಗಾವಿ ತಾಲೂಕಿನ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಸೇನಾ ಆಕಾಂಕ್ಷಿಗಳು ಕೇಂದ್ರ ಬಸ್ ನಿಲ್ದಾಣ, ರೇಲ್ವೆ ನಿಲ್ದಾಣ, ಅಶೋಕ ವೃತ್ತ, ಚನ್ನಮ್ಮ ವೃತ್ತ ಸೇರಿ ವಿವಿಧೆಡೆ ನಿಂತಿದ್ದರು.ಈ ವೇಳೆ ಯುವಕರಿಗೆ ಮಾಧ್ಯಮಗಳ ಜೊತೆ ಮಾತನಾಡಲೂ ಪೊಲೀಸರು ಅವಕಾಶ ನೀಡಲಿಲ್ಲ. ಈ ವೇಳೆ ಅವರನ್ನು ಕಂಗ್ರಾಳಿಯ ಕೆಎಸ್ಆರ್ ಪಿ ತರಬೇತಿ ಕೇಂದ್ರಕ್ಕೆ ಪೊಲೀಸರು ಕರೆದೊಯ್ದರು. ಗುಂಪುಗೂಡಿ ನಿಂತವರನ್ನು ವಿಚಾರಿಸಿ ಪೊಲೀಸರು ವಶಕ್ಕೆ ಪಡೆಯುತ್ತಿದ್ದಾರೆ. ಅಗ್ನಿಪಥ್ ಯೋಜನೆ ವಿರೋಧಿಸಿ ಬೆಳಗಾವಿ ಬಂದ್ಗೆ ಕೆಲವರು ಕರೆ ನೀಡಿರುವ ಹಿನ್ನೆಲೆ ಈವರೆಗೆ ಬೆಳಗಾವಿಯಲ್ಲಿ 170 ಕ್ಕೂ ಅಧಿಕ ಸೇನಾ ಆಕಾಂಕ್ಷಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆ ಸಂಬಂಧ ಪರ-ವಿರೋಧ ವ್ಯಕ್ತವಾಗುತ್ತಿದೆ.//////