ಆತ್ಮ ರಕ್ಷಣೆಗಾಗಿ ಪೊಲೀಸರು ಆರೋಪಿಗೆ ಪೈರಿಂಗ್ ಮಾಡಿದ್ದಾರೆ: ನಗರ ಪೊಲೀಸ್ ಆಯುಕ್ತ ಡಾ. ಬೋರಲಿಂಗಯ್ಯ

ಬೆಳಗಾವಿ: ಉದ್ಯಮಿಯ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಪ್ರಮುಖ ಆರೋಪಿಯನ್ನು ಬಂಧಿಸುವ ವೇಳೆ ಪೊಲೀಸ್ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿದ ಪರಿಣಾಮ ಆತ್ಮ ರಕ್ಷಣೆಗಾಗಿ ನಮ್ಮ ಪೊಲೀಸರು ಫೈರಿಂಗ್ ನಡೆಸಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಡಾ. ಬೋರಲಿಂಗಯ್ಯ ಹೇಳಿದರು.
ಮಂಗಳವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಳೆದ ಮಾ. ತಿಂಗಳಲ್ಲಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿ ತಲೆ ಮರೆಸಿಕೊಂಡಿದ್ದ. ನಿರಂತರವಾಗಿ ಆತನನ್ನು ಬಂಧಿಸಲು ನಮ್ಮ ಪೊಲೀಸ್ ತಂಡಗಳು ಪ್ರಯತ್ನಿಸಿದ್ದವು.
ಖಚಿತ ಮಾಹಿತಿ ಪಡೆದು ಪ್ರಮುಖ ಕೊಲೆ ಆರೋಪಿಯನ್ನು ಬಂಧಿಸಲು ಹೋದಾಗ ನಮ್ಮ ಸಿಬ್ವಂದಿಯ ಮೇಲೆ ಹಲ್ಲೆ ಮಾಡಲು ಯತ್ನಿಸಿದ ಸಂದರ್ಭದಲ್ಲಿ ಆತ್ಮ ರಕ್ಷಣೆಗಾಗಿ ಆತನ ಮೇಲೆ ಪೈರಿಂಗ್ ಮಾಡಿದ್ದಾರೆ ಎಂದರು.
ಆರೋಪಿ ಮೇಲೆ ಪೈರಿಂಗ್ ಮಾಡಿದ ತಕ್ಷಣ ಆತನನ್ನು ಜಿಲ್ಲಾಸ್ಪತ್ರೆಗೆ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಆತ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಈ ಪ್ರಕರಣದ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದರು.
ಪೊಲೀಸ್ ಅಧಿಕಾರಿಗಳು ಫೈರಿಂಗ್ ಮಾಡಿರುವ ಆರೋಪಿಯ ಮೇಲೆ ವಿವಿಧ ಪೊಲೀಸ್ ಠಾಣೆಯಲ್ಲಿ ಆರು ರೌಡಿ ಪ್ರಕರಣಗಳು ದಾಖಲಾಗಿವೆ. ಇನ್ನೂ ಹೆಚ್ಚಿನ ಪ್ರಕರಣ ಇರುವುದರ ಬಗ್ಗೆ ತನಿಖೆ ನಡೆಸಲಾಗುವುದು ಎಂದರು.//////