Belagavi News In Kannada | News Belgaum

ಹುಬ್ಬಳ್ಳಿ ಸಿಟಿ ಪ್ರೌಢಶಾಲೆಯಲ್ಲಿ ಯೋಗ ದಿನಾಚರಣೆ

ಹುಬ್ಬಳ್ಳಿ ಸಿಟಿ ಪ್ರೌಢಶಾಲೆಯಲ್ಲಿ ಯೋಗ ದಿನಾಚರಣೆ

ಹುಬ್ಬಳ್ಳಿಯ ವಿಜಯನಗರದ ಸಿಟಿ ಹೈಸ್ಕೂಲ್ ನಲ್ಲಿ ಎಲ್ಲ ವಿದ್ಯಾರ್ಥಿಗಳು ಯೋಗ ಮಾಡುವುದರ ಮೂಲಕ ಅದ್ದೂರಿಯಾಗಿ ಯೋಗ ದಿನಾಚರಣೆಯನ್ನು ಆಚರಿಸಿದರು.

ಈ ಸಮಯದಲ್ಲಿ ಹಿರಿಯ ಶಿಕ್ಷಕರಾದ ಶ್ರೀ ಪಿ.ಎಚ್ ಪೂಜಾರ ಗುರುಗಳು ಮಾತನಾಡಿ ಇತ್ತಿಚಿನ ದಿನಗಳಲ್ಲಿ ವಿಶ್ವಾದ್ಯಂತ ಹೆಚ್ಚಿನ ಜನರು ತಮ್ಮ ಮಾನಸಿಕ ಒತ್ತಡ ಮತ್ತು ದೈಹಿಕ ಸೌಂದರ್ಯಕ್ಕಾಗಿ ಯೋಗದ ಮೊರೆ ಹೋಗುತ್ತಿದ್ದಾರೆ. ಯೋಗವು ಮನಸ್ಸು ಮತ್ತು ದೇಹವನ್ನು ಸಂಪರ್ಕಿಸುವ ಪ್ರಾಚಿನ ಕಲೆಯಾಗಿದೆ. ಭಾರತವು ಜಗತ್ತಿಗೆ ನೀಡಿದ ಒಂದು ದೊಡ್ಡ ಕೊಡುಗೆಯಾಗಿದೆ. ಮನುಷ್ಯನಿಗೆ ಬಾಹ್ಯ ಸೌಂದರ್ಯ ಎಷ್ಟು ಮುಖ್ಯವೊ, ಆಂತರಿಕ ಸೌಂದರ್ಯವು ಅಷ್ಟೇ ಮುಖ್ಯವಾಗಿರುತ್ತದೆ. ಇವೆರಡನ್ನು ಚೆನ್ನಾಗಿ ಇಟ್ಟುಕೊಳ್ಳಲು ಯೋಗವು ಬಹಳ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಪ್ರತಿ ನಿತ್ಯವು ಮನುಷ್ಯ ಯೋಗ ಮಾಡುವುದರಿಂದ ಉತ್ತಮವಾದ ಆರೋಗ್ಯಕರ ಜೀವನವನ್ನು ನಡೆಸಬಹುದಾಗಿದೆ. ವಿಶ್ವದ ಬಹುತೇಕ ರಾಷ್ಟ್ರಗಳಲ್ಲಿ ಯೋಗ ದಿನವನ್ನು ಆಚರಿಸಲಾಗುತ್ತದೆ ಎಂದು ಯೋಗದ ಮಹತ್ವವನ್ನು ತಿಳಿಸಿದರು…

ಈ ಸಮಯದಲ್ಲಿ ಶಾಲೆಯ ಮುಖ್ಯಾಧ್ಯಾಪಕರಾದ ಶ್ರೀಮತಿ ವ್ಹಿ.ಡಿ ಜೋಶಿ, ಶ್ರೀ ಪಿ.ಎಚ್ ಪೂಜಾರ, ಗೌರಿ ಟೀಚರ್, ಅಜಯ ಜಯರಾಮನವರ, ಸಂಗೀತಾ ಬಿ, ಗೋಧಿ ಟೀಚರ್, ಶಾರದಾ ಹುಲೋಳಿ, ಸವಿತಾ ಕೌತಾಳಿ, ಗಿರಿರಾಜ ಪೂಜಾರ, ರಮೇಶ ಇಟಗೋಣಿ, ಸಂತೋಷ ಭಜಂತ್ರಿ ಸೇರಿದಂತೆ ಎಲ್ಲ ವಿದ್ಯಾರ್ಥಿಗಳು ವಿಶ್ವ ಯೋಗ ದಿನಾಚರಣೆಯಲ್ಲಿ ಭಾಗಿಯಾಗಿದ್ದರು.