ಹುಕ್ಕೇರಿಯಲ್ಲಿ ಸರಣಿಗಳ್ಳತನ: ಓರ್ವನ ಬಂಧನ

ಹುಕ್ಕೇರಿ: ಪಟ್ಟಣದಲ್ಲಿ ಇತ್ತೀಚೆಗೆ ನಡೆದ ಸರಣಿ ಮನೆ ಕಳ್ಳತನಕ್ಕೆ ಸಂಬಂಧಿಸಿದಂತೆ ಒಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಯಿಂದ ಬಂಗಾರ, ಬೆಳ್ಳಿ ಮತ್ತು ನಗದು ಸೇರಿ ಒಟ್ಟು 57 ಸಾವಿರ ಸ್ವತ್ತನ್ನು ಪೊಲೀಸರು ವಶಪಡಿಕೊಂಡಿದ್ದಾರೆ. ಪಟ್ಟಣದ ವಿವಿಧ ಗಲ್ಲಿಗಳಲ್ಲಿ ಆರು ಮನೆಗಳಲ್ಲಿ ಇತ್ತೀಚೆಗೆ ಸರಣಿ ಕಳ್ಳತನ ನಡೆದಿತ್ತು. ಈ ಕುರಿತು ಸ್ಥಳೀಯ ಠಾಣೆಯಲ್ಲಿ ದೂರು ಕೂಡಾ ದಾಖಲಾಗಿತ್ತು. ಇದೇ ಸಮಯದಲ್ಲಿ ಸಂಕೇಶ್ವರ ಮತ್ತು ಯಮಕನಮರಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲೂ ಕಳ್ಳತನ ಪ್ರಕರಣ ನಡೆದಿದ್ದವು. ಸರಣಿ ಮನೆ ಕಳ್ಳತನ ನಡೆದ ನಾಲ್ಕೇ ದಿನದಲ್ಲಿ ಪೊಲೀಸರು ಕಳ್ಳನನ್ನು ಬಂಧಿಸಲಾಗಿದೆ. ಕಾನೂನು ಸಂಘರ್ಷದಲ್ಲಿರುವ ಬಾಲಾಪರಾಧಿಯನ್ನು ವಶಕ್ಕೆ ಪಡೆದು ಬಾಲ ನ್ಯಾಯ ಮಂಡಳಿಗೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ./////