ಅಪರ ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಆಹ್ವಾನ

ಬೆಳಗಾವಿ : ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನಲ್ಲಿ ಕಾರ್ಯನಿರ್ವಸುತ್ತಿರುವ ಅಪರ ಸರ್ಕಾರಿ ವಕೀಲರ ಹುದ್ದೆ ಅವಧಿ ಮುಕ್ತಾಯವಾಗಿದ್ದು, ಹುದ್ದೆಗೆ ಹೊಸ ಅಭ್ಯರ್ಥಿಗಳನ್ನು ನೇಮಕಾತಿ ಮಾಡಲು ಏಳು(7) ವರ್ಷಗಳ ಕಾಲ ವಕೀಲ ವೃತ್ತಿಯನ್ನು ಪೂರೈಸಿದ ಅರ್ಹ ವಕೀಲರಿಂದ ಅರ್ಜಿ ಆಹ್ವಾನಿಸಲಾಗಿದೆ.
ಇಚ್ಛೆಯುಳ್ಳ ಅರ್ಹ ವಕೀಲರು ತಮ್ಮ ಹೆಸರು, ವಿದ್ಯಾರ್ಹತೆ, ಜಾತಿ, ವಯಸ್ಸು, ಅನುಭವ ಮುಂತಾದ ವೈಯಕ್ತಿಕ ಪೂರ್ಣ ವಿವರಗಳೊಂದಿಗೆ ಸಮರ್ಥನೆಗಾಗಿ ಅವಶ್ಯಕ ಪತ್ರಗಳ ಧೃಡಿಕೃತ ನಕಲುಗಳನ್ನು ಲಗತ್ತಿಸಿ ಜುಲೈ 22 ರ ಒಳಗಾಗಿ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಆಡಳಿತ ಶಾಖೆಗೆ ಅರ್ಜಿಗಳನ್ನು ಸಲ್ಲಿಸಬೇಕು. ನಿಗದಿತ ಅವಧಿ ನಂತರ ಸ್ವೀಕೃತವಾದ ಅರ್ಜಿಗಳನ್ನು ಪರಿಗಣಿಸುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.