Belagavi News In Kannada | News Belgaum

ಕಾಗವಾಡ ಮತಕ್ಷೇತ್ರದ ಜನಪ್ರಿಯ ಶಾಸಕರು ಹಾಗೂ ಮಾಜಿ ಸಚಿವರಾದ ಸನ್ಮಾನ್ಯ ಶ್ರೀ ಶ್ರೀಮಂತ (ತಾತ್ಯಾ) ಪಾಟೀಲ* ಅವರು ಸ್ಥಳೀಯ ಗ್ರಾಮಸ್ಥರೊಂದಿಗೆ ಪೂಜೆ ಸಲ್ಲಿಸಿ, ಕಾಮಗಾರಿಗೆ ಚಾಲನೆ

ಶಿರಗುಪ್ಪಿ ಗ್ರಾಮದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ *ಶಿರಗುಪ್ಪಿ ಜೈನ ಸಮಾಜದ ಸಮುದಾಯ ಭವನ ನಿರ್ಮಾಣಕ್ಕೆ ಮಂಜೂರಾದ ಸುಮಾರು 50 ಲಕ್ಷ ರೂ. ವೆಚ್ಚದ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಕಾಗವಾಡ ಮತಕ್ಷೇತ್ರದ ಜನಪ್ರಿಯ ಶಾಸಕರು ಹಾಗೂ ಮಾಜಿ ಸಚಿವರಾದ ಸನ್ಮಾನ್ಯ ಶ್ರೀ ಶ್ರೀಮಂತ (ತಾತ್ಯಾ) ಪಾಟೀಲ* ಅವರು ಸ್ಥಳೀಯ ಗ್ರಾಮಸ್ಥರೊಂದಿಗೆ ಪೂಜೆ ಸಲ್ಲಿಸಿ, ಕಾಮಗಾರಿಗೆ ಚಾಲನೆ ನೀಡಿದರು.

ಈ ಸಮಯದಲ್ಲಿ ಶಿರಗುಪ್ಪಿ ಗ್ರಾಮದ ಸಮಸ್ತ ಗ್ರಾಮಸ್ಥರ ಪರವಾಗಿ ನ್ಯಾಯವಾದಿಗಳಾದ ಶ್ರೀ ಅಭಯಕುಮಾರ ಅಕಿವಾಟೆ ಅವರು ಮಾತನಾಡಿ ಕಾಗವಾಡ ಮತಕ್ಷೇತ್ರದ ಜನಪ್ರಿಯ ಶಾಸಕರು ಅವರು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಚಿವರಾಗಿದ್ದ ಸಮಯದಲ್ಲಿ ನಮ್ಮ ಕಾಗವಾಡ ಮತಕ್ಷೇತ್ರದ ಪ್ರತಿಯೊಂದು ಗ್ರಾಮದ ಜೈನ ಸಮಾಜಕ್ಕೆ ಸಾಕಷ್ಟು ಅನುದಾನವನ್ನು ನೀಡಿರುತ್ತಾರೆ, ಅದೇ ರೀತಿ ನಮ್ಮ ಶಿರಗುಪ್ಪಿ ಗ್ರಾಮದ ನಮ್ಮ ಜೈನ ಸಮಾಜಕ್ಕೆ ಸುಮಾರು 1 ಕೋಟಿ ರೂ. ಗಳಷ್ಟು ಅನುದಾನ ಮಂಜೂರು ಗೊಳಿಸುತ್ತಾರೆ, ನಮ್ಮ ಕ್ಷೇತ್ರದಲ್ಲಿ ಅಷ್ಟೇ ಅಲ್ಲದೆ ನಮ್ಮ ಜೈನ ಧರ್ಮದ ಪವಿತ್ರ ಕ್ಷೇತ್ರವಾದ ಶ್ರವಣಬೆಳಗೊಳದ ಅಭಿವೃದ್ಧಿಗಾಗಿ ಸುಮಾರು 50 ಕೋಟಿ ರೂ. ಗಳ ಅನುದಾನವನ್ನು ಮಂಜೂರು ಗೊಳಿಸಿದ್ದು, ಅಷ್ಟೇ ಅಲ್ಲದೆ ರಾಜ್ಯದಲ್ಲಿ ಹಲವಾರು ಜೈನ ಧರ್ಮದ ಸಮಾಜಕ್ಕೆ ಸಾಕಷ್ಟು ಅನುದಾನವನ್ನು ಮಂಜೂರುಗೊಳಿಸಿದ್ದು ನಾವು ನಮ್ಮ ಸಮಸ್ತ ಜೈನ ಸಮಾಜದ ವತಿಯಿಂದ ಅವರಿಗೆ ತುಂಬು ಹೃದಯದ ಅಭಿನಂದನೆ ಕೋರುತ್ತೇವೆ ಎಂದರು.

ಈ ಸಮಯದಲ್ಲಿ ಶಾಸಕರು ಮಾತನಾಡಿ ನಾನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವನಾಗಿದ್ದ ಸಮಯದಲ್ಲಿ ಜೈನ ಸಮಾಜದ ಅಭಿವೃದ್ಧಿಗಾಗಿ ಸಾಕಷ್ಟು ಅನುದಾನವನ್ನು ಮಂಜೂರು ಗೊಳಿಸಿದ್ದು ಸಮಸ್ತ ಜೈನ ಸಮಾಜದ ಬಾಂಧವರು ಇದರ ಲಾಭವನ್ನು ಪಡೆಯಿರಿ ಎಂದು ಕರೆ ನೀಡಿ, ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಉತ್ತಮ ಗುಣಮಟ್ಟದ ಸಮುದಾಯ ಭವನ ನಿರ್ಮಿಸುವಂತೆ ಸೂಚನೆ ನೀಡಿದರು.

ಈ ಸಮಯದಲ್ಲಿ ಸ್ಥಳೀಯ ಮುಖಂಡರು, ಗ್ರಾಮ ಪಂಚಾಯತಿ ಅಧ್ಯಕ್ಷರು, ಸದಸ್ಯರು, ಜೈನ ಸಮಾಜದ ಬಾಂಧವರು, ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.