Belagavi News In Kannada | News Belgaum

ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ

ಹಾವೇರಿ: ಸಾಲಬಾಧೆ ತಾಳಲಾರದೇ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಣೆಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಜಿಲ್ಲೆಯ ರಾಣೆಬೆನ್ನೂರು ತಾಲೂಕು ಲಿಂಗದಹಳ್ಳಿ ಗ್ರಾಮ ರೈತ ವಾಸಪ್ಪ (55) ಆತ್ಮಹತ್ಯೆ ಮಾಡಿಕೊಂಡ ರೈತ.

4 ಎಕರೆ ಜಮೀನು‌ ಹೊಂದಿದ್ದು ನಾಲ್ಕು ಲಕ್ಷ ಸಾಲ ಮಾಡಿ ಬೆಳೆ ಹಾಕಿದ್ದರು. ಆದರೆ ಸಕಾಲದಲ್ಲಿ ಮಳೆಯಾಗದೇ ಬಿತ್ತಿದ ಮೆಕ್ಕೆಜೋಳ ಹಾನಿಯಾಗಿತ್ತು ಲಕ್ಷಾಂತರ ಹಣ ಕಳೆದುಕೊಂಡಿದ್ದರು. ಇದರಿಂದ ಮನನೊಂದ ವಾಸಪ್ಪ ಮರಕ್ಕೆ ಟವಲ್ ನಿಂದ ಕುಣಿಕೆ ಕಟ್ಟಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ./////