Belagavi News In Kannada | News Belgaum

ನಾಳೆ ಅಗ್ನಿಪಥ ಯೋಜನೆ ವಿರೋಧಿಸಿ ಭಾರತೀಯ ಕೃಷಿಕ ಸಮಾಜ (ಸಂ) ರೈತ ಸಂಘಟನೆ ವತಿಯಿಂದ ಡಿಸಿಗೆ ಮನವಿ

ಬೆಳಗಾವಿ: “ಅಗ್ನಿಪಥ” ಯೋಜನೆ ವಿರುದ್ದ ದೇಶವ್ಯಾಪಿ ನಡೆಯುತ್ತಿರುವ ಯುವಜನರ ಪ್ರತಿಭಟನೆಗೆ ಭಾರತೀಯ ಕೃಷಿಕ ಸಮಾಜ (ಸಂ) ರೈತ ಸಂಘಟನೆ, ಕರ್ನಾಟಕ ತನ್ನ ಬೆಂಬಲವನ್ನು ಘೋಷಿಸಿದ್ದು,  ಜೂನ್ 24, ರಂದು  ಮಧ್ಯಾಹ್ನ 12 ಗಂಟೆಗೆ ವಿವಿಧ ಸಾಮೂಹಿಕ ಸಂಘನೆಗಳ ನೇತೃತ್ವದಲ್ಲಿ ಬೆಳಗಾವಿಯ ಜಿಲ್ಲಾಧಿಕಾರಿ ಮುಖಾಂತರ ರಾಷ್ಟ್ರಪತಿಗೆ  ಮನವಿ ಸಲ್ಲಿಸಲಾಗುವುದು.

ಈ ಸಂದರ್ಭದಲ್ಲಿ ಯುವಜನರು, ಸಾಮೂಹಿಕ ಸಂಘಟನೆ ಗಳು, ರೈತಪರ, ಕಾರ್ಮಿಕ, ದಲಿತ, ವಿದ್ಯಾರ್ಥಿ, ಮಹಿಳಾ ಹಾಗೂ ಪಕ್ಷಾತೀತವಾಗಿ ರಾಜಕೀಯ ಪಕ್ಷಗಳು ಸಾಮೂಹಿಕವಾಗಿ ಭಾಗವಹಿಸಬೇಕೆಂದು ಭಾರತೀಯ ಕೃಷಿಕ ಸಮಾಜ (ಸಂ) ರೈತ ಸಂಘಟನೆ ರಾಜ್ಯಾಧ್ಯಕ್ಷ ಸಿದಗೌಡ ಮೋದಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.//////