Belagavi News In Kannada | News Belgaum

‘ಅಮೃತ ಭಾರತಿಗೆ ಕನ್ನಡದಾರತಿ’ ಅಭಿಯಾನ ಕಾರ್ಯಕ್ರಮ

ಜೂ.25ಕ್ಕೆ ಜಿಲ್ಲೆಯ 5 ಸ್ಥಳಗಳಲ್ಲಿ ಏಕಕಾಲಕ್ಕೆ ಅಭಿಯಾನ ಕಾರ್ಯಕ್ರಮ

 

ಬೆಳಗಾವಿ ಜೂನ 24: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ‘ಅಮೃತ ಭಾರತಿಗೆ ಕನ್ನಡದಾರತಿ’ ಅಭಿಯಾನ ಕಾರ್ಯಕ್ರಮವನ್ನು ಶನಿವಾರ(ಜೂನ್25) ಚೆನ್ನಮ್ಮನ ಕಿತ್ತೂರು ಸೇರಿದಂತೆ ವಿವಿಧ ನಾಲ್ಕು ಸ್ಥಳಗಳಲ್ಲಿ ಹಮ್ಮಿಕೊಳ್ಳಲಾಗಿದೆ.

ಚನ್ನಮ್ಮನ ಕಿತ್ತೂರಿನ ಕಾರ್ಯಕ್ರಮದ ವಿವರ:

ಚೆನ್ನಮ್ಮನ ವೃತ್ತದಿಂದ ಕೋಟೆ ಆವರಣದವರೆಗೆ ಬೆಳಿಗ್ಗೆ 9.30 ಗಂಟೆಗೆ ಮೆರವಣ ಗೆ ನೆಡಯಲಿದೆ. ಬೆಳಿಗ್ಗೆ 10.30 ಗಂಟೆಗೆ ಕಿತ್ತೂರು ಪಟ್ಟಣ ಪಂಚಾಯಿತಿ ಆವರಣದಲ್ಲಿ ಶಿಲಾಫಲಕ ಅನಾವರಣಗೊಳಿಸಲಾಗುವುದು. ವೇದಿಕೆ ಕಾರ್ಯಕ್ರಮ ಬೆಳಿಗ್ಗೆ 11 ಗಂಟೆಗೆ ಕೋಟೆ ಆವರಣದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಜಲಸಂಪನ್ಮೂಲ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅವರು ಉದ್ಘಾಟಿಸಲಿದ್ದಾರೆ. ಕಿತ್ತೂರು ಶಾಸಕರಾದ ಮಹಾಂತೇಶ ದೊಡ್ಡಗೌಡ್ರ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.

ರಾಮದುರ್ಗ ತಾಲೂಕಿನ ಹುಲಕುಂದ ಕಾರ್ಯಕ್ರಮ ವಿವರ:
ಬೆಳಿಗ್ಗೆ 9.30 ಗಂಟೆಗೆ ಹುಲಕುಂದದ ಕರೆಮ್ಮ ದೇವಸ್ಥಾನದಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವರೆಗೆ ಮೆರವಣ ಗೆ ನಡೆಯಲಿದೆ. ಬಳಿಕ 10.30 ಗಂಟೆಗೆ ಬಸವಣ್ಣ ಗುಡಿಯ ಹತ್ತಿರ ಶಿಲಾಫಕವನ್ನು ಅವಾವರಣಗೊಳಿಸಲಾಗುವುದು. ವೇದಿಕೆ ಕಾರ್ಯಕ್ರಮ ಬೆಳಿಗ್ಗೆ 11 ಗಂಟೆಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಜಲಸಂಪನ್ಮೂಲ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅವರು ಉದ್ಘಾಟಿಸಲಿದ್ದಾರೆ. ರಾಮದುರ್ಗ ಶಾಸಕರಾದ ಮಹದೇವಪ್ಪ ಯಾದವಾಡ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.

ಬೆಳವಡಿ ಕಾರ್ಯಕ್ರಮದ ವಿವರ:

ಬೆಳವಡಿ ಮಲ್ಲಮ್ಮ ವೃತ್ತದಿಂದ ಪರಮನಾಯ್ಕರ ಕಲ್ಯಾಣ ಮಂಟಪದ ವರೆಗೆ ಬೆಳಿಗ್ಗೆ 9.30 ಗಂಟೆಗೆ ಮೆರವಣ ಗೆ ನಡೆಯಲಿದೆ. ಬೆಳವಡಿ ಮಲ್ಲಮ್ಮನ ಬ್ಯಾಂಕ್ ಎದುರುಗಡೆ ಬೆಳಿಗ್ಗೆ 10.30 ಗಂಟೆಗೆ ಶಿಲಾಫಲಕ ಅನಾವರಣಗೊಳಿಸಲಾಗುವುದು. ವೇದಿಕೆ ಕಾರ್ಯಕ್ರಮವನ್ನು 11 ಗಂಟೆಗೆ ಪರಮನಾಯ್ಕರ ಕಲ್ಯಾಣ ಮಂಟದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಜಲಸಂಪನ್ಮೂಲ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅವರು ಉದ್ಘಾಟಿಸಲಿದ್ದಾರೆ. ಬೈಲಹೊಂಗಲ ಶಾಸಕರಾದ ಮಹಾಂತೇಶ ಕೌಜಲಗಿ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.

ಹುದಲಿ ಕಾರ್ಯಕ್ರಮದ ವಿವರ:

ಹುದಲಿ ಬಸ್ ನಿಲ್ದಾಣದಿಂದ ಗಾಂಧಿ ಭವನದವರೆಗೆ ಬೆಳಿಗ್ಗೆ 9.30 ಗಂಟೆಗೆ ಮೆರವಣ ಗೆ ನಡೆಯಲಿದೆ. ಗಾಂಧಿ ಭವನದ ಆವರಣದಲ್ಲಿ ಬೆಳಿಗ್ಗೆ 10.30 ಗಂಟೆಗೆ ಶಿಲಾಫಲಕ ಅನಾವರಣಗೊಳಿಸಲಾಗುವುದು. ವೇದಿಕೆ ಕಾರ್ಯಕ್ರಮ ಗಾಂಧಿಭವನದ ಆವರಣದಲ್ಲಿ ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ.

ಕಾರ್ಯಕ್ರಮವನ್ನು ಜಲಸಂಪನ್ಮೂಲ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅವರು ಉದ್ಘಾಟಿಸಲಿದ್ದಾರೆ. ಯಮಕನಮರಡಿ ಶಾಸಕರಾದ ಸತೀಶ ಜಾರಕಿಹೊಳಿ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.

 

ನಂದಗಡ ಕಾರ್ಯಕ್ರಮದ ವಿವರ:

ನಂದಗಡ ಬಸ್ ನಿಲ್ದಾಣದಿಂದ ಕಾಲೇಜು ರಸ್ತೆವರಗೆ ಬೆಳಿಗ್ಗೆ 9.30 ಗಂಟೆಗೆ ಮೆರವಣ ಗೆ ನಡೆಯಲಿದೆ. ಬೆಳಿಗ್ಗೆ 10.30 ಗಂಟೆಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪುಣ್ಯಭೂಮಿಯಲ್ಲಿ ಶಿಲಾಫಲಕ ಅನಾವರಣಗೊಳಿಸಲಾಗುವುದು. ಬೆಳಿಗ್ಗೆ 11 ಗಂಟೆಗೆ ಎಪಿಎಂಸಿ ಆವರಣದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ.

ಕಾರ್ಯಕ್ರಮವನ್ನು ಜಲಸಂಪನ್ಮೂಲ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅವರು ಉದ್ಘಾಟಿಸಲಿದ್ದಾರೆ. ಖಾನಾಪೂರ ಶಾಸಕರಾದ ಅಂಜಲಿ ನಿಂಬಾಳ್ಕರ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.

ಜಿಲ್ಲೆಯ ಎಲ್ಲ ಕಾರ್ಯಕ್ರಮಗಳಲ್ಲಿ ಮುಖ್ಯ ಅತಿಥಿಗಳಾಗಿ ಅರಣ್ಯ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾದ ಉಮೇಶ ಕತ್ತಿ, ಮುಜರಾಯಿ ಹಜ್ ಹಾಗೂ ವಕ್ಫ್ ಸಚಿವರಾದ ಶಶಿಕಲಾ ಜೊಲ್ಲೆ, ವಿಶೇಷ ಆಮಂತ್ರಿತರಾಗಿ ವಿಧಾನಸಭೆ ಉಪ ಸಭಾಧ್ಯಕ್ಷರಾದ ವಿಶ್ವನಾಥ ಮಾಮನಿ, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಮಹೇಶ ಕುಮಠಳ್ಳಿ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ದುರ್ಯೋಧನ ಐಹೊಳೆ ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಪಿ.ರಾಜೀವ ಅವರು ಭಾಗಹಿಸಲಿದ್ದಾರೆ. ಇನ್ನುಳಿದಂತೆ ಜಿಲ್ಲೆಯ ಎಲ್ಲ ಸಂಸದರು, ಶಾಸಕರು, ಅಧಿಕಾರಿಗಳು ಕಾರ್ಯಕ್ರಮಗಳಲ್ಲಿ ಉಪಸ್ಥಿತರಿರಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.////

 

ಮಲೇರಿಯಾ ಮಾಸಾಚರಣೆ
——————————————
ಮಲೇರಿಯಾ ನಿಯಂತ್ರಣಕ್ಕಾಗಿ ಜಾಗೃತೆ ಅಗತ್ಯ: ಡಾ. ಶಿವಾನಂದ ಮಾಸ್ತಿಹೊಳಿ

 

ಬೆಳಗಾವಿ,ಜೂನ್24 : ಮಳೆಗಾಲ ಆರಂಭವಾಗಿದ್ದರಿಂದ ಮನೆ, ನಾವಿರುವ ಪ್ರದೇಶದ ಸುತ್ತಲೂ ಸ್ವಚ್ಛತೆ ಕಾಪಾಡಿಕೊಳ್ಳಬೇಕಿದೆ. ಇದರಿಂದ ಸೊಳ್ಳೆಗಳ ಹಾವಳಿ ತಡೆಯುವದರ ಮೂಲಕ ಮಲೇರಿಯಾ ನಿಯಂತ್ರಿಸಬಹುದು ಎಂದು ಬೆಳಗಾವಿ ತಾಲುಕಾ ವೈದ್ಯಾಧಿಕಾರಿ ಡಾ. ಶಿವಾನಂದ ಮಾಸ್ತಿಹೊಳಿ ತಿಳಿಸಿದರು.

ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಬೆಳಗಾವಿ ತಾಲೂಕಾ ಆರೋಗ್ಯಾಧಿಕಾರಿಗಳ ಕಾರ್ಯಾಲಯ ಹಾಗೂ ಯಳ್ಳೂರ ಪ್ರಾಥಮಿಕ ಆರೋಗ್ಯ ಕೇಂದ್ರ ಇವರ ಸಂಯುಕ್ತ ಆಶ್ರಯದಲ್ಲಿ ಹಲಗಾದಲ್ಲಿರುವ ಆರ್.ಡಿ. ದೊಡ್ಡಣ್ಣವರ ಭರತೇಶ ನಸಿರ್ಂಗ ಕಾಲೇಜಿನಲ್ಲಿ ಮಲೇರಿಯಾ ಮಾಸಾಚರಣೆಯ ಅಂಗವಾಗಿ ಗುರುವಾರ (ಜೂನ್23) ಏರ್ಪಡಿಸಲಾಗಿದ್ದ ಭಾಷಣ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡಿದರು.

ಮಾಸಾಚಣ ಯ ಕುರಿತು ಏರ್ಪಡಿಸಿದ್ದ ಭಾಷಣ ಸ್ಪರ್ಧೆಯಲ್ಲಿ ವಿಜೇತರಾದ ಚೈತ್ರಾ ಕೆ, ಅಭಿμÉೀಕ ದ್ವಿತೀಯ, ಪದ್ಮಜಾ ಕ್ರಮವಾಗಿ ಪ್ರಥಮ, ದ್ವಿತೀಯ, ತೃತೀಯ ಬಹುಮಾನ ಪಡೆದುಕೊಂಡರು.

ಕಾರ್ಯಕ್ರಮದಲ್ಲಿ ಭರತೇಶ ನಸಿರ್ಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಸಂಗೀತಾ ಮೋರೇಶ್ವರ, ಯಳ್ಳೂರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು ರಮೇಶ ದಂಡಗಿ, ಎಂಟಾಮಾಲಾಜಿಸ್ಟ್ ಗಣಪತಿ ಬಾರ್ಕಿ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿ.ಎಲ್. ಪಾತಲಿ ಹಾಗೂ ನಸಿರ್ಂಗ ಕಾಲೇಜಿನ ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಎಫ್.ಎಂ. ಮಾಲಿಹಾಳ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.////

 

ಶಿಶುಪಾಲನಾ ಕೇಂದ್ರಕ್ಕೆ ಸಿಬ್ಬಂದಿ ನೇಮಕಾತಿ: ಅರ್ಜಿ ಆಹ್ವಾನ

 

ಬೆಳಗಾವಿ,ಜೂನ್24: ಶಿಶು ಅಭಿವೃದ್ಧಿ ಯೋಜನೆಯಡಿ ರಾಯಬಾಗ ವ್ಯಾಪ್ತಿಯ ರಾಯಬಾಗ ಪಟ್ಟಣದಲ್ಲಿ ಹೊಸದಾಗಿ ಪ್ರಾರಂಭವಾಗುತ್ತಿರುವ ಶಿಶುಪಾಲನಾ ಕೇಂದ್ರಕ್ಕೆ ಒಬ್ಬ ಶಿಕ್ಷಕಿ, ಇಬ್ಬರು ಸಹಾಯಕಿಯರನ್ನು ನೇಮಕಾತಿ ಮಾಡಿಕೊಳ್ಳುವ ಅವಶ್ಯಕತೆ ಇರುತ್ತಿದ್ದು ಅರ್ಹರಿಂದ ಆರ್ಜಿಗಳನ್ನು ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಶಾಲಾ ಪೂರ್ವ ಶಿಕ್ಷಣ ತರಬೇತಿ (ಓಖಿಅ) ಪಡೆದಿರುವ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು 10ನೇ ತರಗತಿ ಉತ್ತೀರ್ಣಗೊಂಡು ವಯೋಮಿತಿ 20 ರಿಂದ 40 ವರ್ಷದೊಳಗಿನ ಆಸಕ್ತಿಯುಳ್ಳ ಸ್ಥಳೀಯ ಅರ್ಹ ಅಭ್ಯರ್ಥಿಗಳು ಜೂನ್ 30 2022 5.30 ರ ಒಳಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ ರಾಯಬಾಗ ಇಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಛೇರಿ ದೂರವಾಣ ಸಂಖ್ಯೆ : 08331-225292 ಕ್ಕೆ ಕಛೇರಿ ಕೆಲಸದ ಅವಧಿಯಲ್ಲಿ ಸಂಪರ್ಕಿಸಬಹುದು ಎಂದು ರಾಯಬಾಗದ ಪರಿವರ್ತನಾ ಸೌಹಾರ್ದ ಸ್ತ್ರೀ ಶಕ್ತಿ ಸ್ವ-ಸಹಾಯ ಸಂಘಗಳ ಬ್ಲಾಕ್ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.////

110 ಕೆ.ವ್ಹಿ ಎಮ್. ಕೆ. ಹುಬ್ಬಳ್ಳಿ ವಿದ್ಯುತ್ ವಿತರಣಾ ಕೇಂದ್ರ: ಜೂ.26 ರಂದು ವಿದ್ಯುತ್ ವ್ಯತ್ಯಯ

 

ಬೆಳಗಾವಿ,ಜೂನ್24 : ಕ.ವಿ.ಪ್ರ.ನಿ.ನಿ. ವತಿಯಿಂದ 110 ಕೆ.ವ್ಹಿ ಎಮ್. ಕೆ. ಹುಬ್ಬಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೊದಲನೇಯ ತ್ರೈಮಾಸಿಕ ಹಾಗೂ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ಈ ಉಪಕೇಂದ್ರದಿಂದ ಸರಬರಾಜು ಆಗುವ ವಿದ್ಯುತ್‍ನಲ್ಲಿ ಜೂನ್ 26 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಆಗಲಿದೆ.

ಹಿರೇಮುನವಳ್ಳಿ, ಚಿಕ್ಕಮುನವಳ್ಳಿ, ಗಂದಿಗವಾಡ, ಹಿರೇ ಅಂಗ್ರೋಳ್ಳಿ, ಚಿಕ್ಕ ಅಂಗ್ರೊಳ್ಳಿ, ಹಂದೂರ, ಹುಲಿಕೊತ್ತಲ, ಇಟಗಿ, ಬೋಗೂರ, ಬೇಡರಹಟ್ಟಿ, ತೊಲಗಿ, ಬಿಳಕಿ, ಅವರೊಳ್ಳಿ ಹಾಗೂ ಕಗ್ಗಣಗಿ ಗ್ರಾಮಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್‍ಸೆಟ್‍ಗಳ ಏರಿಯಾಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಬೆಳಗಾವಿ ಗ್ರಾಮೀಣ ಭಾಗದ ಕಾರ್ಯನಿರ್ವಾಹಕ ಇಂಜಿನೀಯರ ಅವರು ಪ್ರಕಟಣೆಲ್ಲಿ ತಿಳಿಸಿದ್ದಾರೆ./////

 

ತುರ್ತು ನಿರ್ವಹಣಾ ಕಾರ್ಯ: ಜೂ.25 ರಂದು ವಿದ್ಯುತ್ ವ್ಯತ್ಯಯ

 

ಬೆಳಗಾವಿ,ಜೂನ್24: ಕ.ವಿ.ಪ್ರ.ನಿ.ನಿ. ವತಿಯಿಂದ ಮೊದಲನೇಯ ತ್ರೈಮಾಸಿಕ ಹಾಗೂ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ 110 ಕೆ.ವ್ಹಿ. ಖಾನಾಪೂರ ಉಪಕೇಂದ್ರದಿಂದ ಸರಬರಾಜು ಆಗುವ ವಿದ್ಯತ್‍ನ್ನು ಜೂನ್ 25 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಸ್ಥಗಿತಗೊಳಿಸಲಾಗುವುದು.

ಲೈಲಾ ಶುಗರ ಕಾರ್ಖಾನೆ, ದೇವಲತ್ತಿ, ಬಿದರಭಾವಿ, ಭಂಡಾರಗಾಳಿ, ಗರ್ಲಗುಂಜಿ, ತೋಪಿನಕಟ್ಟಿ, ಬೋರಗಾಂವ, ನಿಡಗಲ, ದೊಡ್ಡಹೊಸೂರ, ಸಣ್ಣಹೊಸೂರ, ಕರಂಬಳ, ಜಳಗಾ, ಕುಪ್ಪಟಗಿರಿ, ಲೋಕೋಳ್ಳಿ, ಲಕ್ಕೇಬೈಲ, ಯಡೋಗಾ, ಬಳೋಗಾ, ಜೈನಕೊಪ್ಪ, ಗಾಂಧಿನಗರ, ಹಲಕಣ ್, ಕೋರ್ಟ ಪ್ರದೇಶ, ಕೈಗಾರಿಕಾ ಪ್ರದೇಶ, ಬಾಚೋಳ್ಳಿ, ಕೌಂದಲ, ಝಾಡನಾವಗಾ, ಲಾಲವಾಡಿ, ಹೆಬ್ಬಾಳ, ನಂದಗಡ, ಕಸಬಾ ನಂದಗಡ, ಕಾರಲಗಾ, ಶಿವೊಳ್ಳಿ ಹಾಗೂ ಚಾಪಗಾಂವ ಗ್ರಾಮಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್‍ಸೆಟ್‍ಗಳ ಏರಿಯಾಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಅದೇ ರೀತಿ 33ಕೆ.ವ್ಹಿ. ಲೋಂಡಾ ಹಾಗೂ ಖಾನಾಪೂರ ಉಪಕೇಂದ್ರದಲ್ಲಿಯೂ ತುರ್ತು ನಿರ್ವಹಣಾ ಕಾರ್ಯ ಕೈಗೊಳ್ಳುತ್ತಿರುವುರಿಂದ ಜೂನ್ 25 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಈ ವಿದ್ಯುತ್ ವಿತರಣಾ ಕೇಂದ್ರ ವ್ಯಾಪ್ತಿಯ ನಾಗರಗಾಳಿ, ನಾಗರಗಾಳಿ ರೇಲ್ವೆ ಸ್ಟೇಶನ್, ಮುಂಡವಾಡ, ಕುಂಬರ್ಡಾ, ತಾರವಾಡ, ಲೋಂಡಾ, ಲೋಂಡಾ ರೇಲ್ವೆ ಸ್ಟೇಶನ್, ಗುಂಜಿ, ಮೋಹಿಶೇಟ, ವಾಟ್ರೆ, ಭಾಲ್ಕೆ ಬಿ.ಕೆ, ಭಾಲ್ಕೆ ಕೆ.ಎಚ್, ಶಿಂದೋಳ್ಳಿ, ಹೊನ್ಕಲ, ಸಾವರಗಾಳಿ, ಅಂಬೇವಾಡಿ, ತಿವೊಳ್ಳಿ, ಡೋಕೆಗಾಳಿ, ಖಾನಾಪೂರ ಪಟ್ಟಣ, ಶಿವಾಜಿ ನಗರ, ರುಮೇವಾಡಿ, ಓತೋಳ್ಳಿ, ಮೊದೇಕೊಪ್ಪ, ನಾಗುರ್ಡಾ, ರಾಮಗುರವಾಡಿ, ಅಂಬೋಳಿ, ಹರಸನವಾಡಿ, ಅಸೋಗಾ, ನೇರಸಾ, ಅಶೋಕ ನಗರ, ಮಂತುರ್ಗಾ, ಶೇಡೇಗಾಳಿ ಹಾಗೂ ಹೆಮ್ಮಡಗಾ ಪ್ರದೇಶಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್‍ಸೆಟ್‍ಗಳ ಏರಿಯಾಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಬೆಳಗಾವಿ ಗ್ರಾಮೀಣ ವಿಭಾಗದ ಕಾರ್ಯನಿರ್ವಾಹಕ ಇಂಜಿನೀಯರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.////