Belagavi News In Kannada | News Belgaum

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ; ಸಂಚಾರಕ್ಕೆ ಆತಂಕ

ಪಣಜಿ: ಐಡಿಸಿ ವೆರ್ಣಾದಿಂದ ಲೋಟ್ಲಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಸುರಿದ ಧಾರಾಕಾರ ಮಳೆಗೆ ಭಾರಿ ಪ್ರಮಾಣದಲ್ಲಿ ಭೂಕುಸಿತವುಂಟಾಗಿ ಕೆಲ ಕಾಲ ವಾಹನ ಸಂಚಾರಕ್ಕೆ ಅಡ್ಡಿಯುಂಟಾದ ಘಟನೆ ನಡೆದಿದೆ.

ಕಳೆದ ಎರಡು ದಿನಗಳಿಂದ ಗೋವಾದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಐಡಿಸಿ ವೆರ್ಣಾದಿಂದ ಲೋಟ್ಲಿಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಭಾರಿ ಪ್ರಮಾಣದಲ್ಲಿ ಗುಡ್ಡ ಕುಸಿದಿದ್ದು ಬೃಹತ್ ಗಾತ್ರದ ಬಂಡೆಗಳು ರಸ್ತೆಗೆ ಬಂದು ಬೀಳುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

ಅಗ್ನಿಶಾಮಕ ದಳದ ಅಧಿಕಾರಿ ದಿಲೀಪ ಬಿಚೋಲಕರ್ ಮಾರ್ಗದರ್ಶನದಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಬಂದು ಹಲವು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ರಸ್ತೆಯ ಮೇಲೆ ಬಿದ್ದಿದ್ದ ಮಣ್ಣು ಮತ್ತು ಕಲ್ಲುಗಳನ್ನು ತೆರವುಗೊಳಿಸಿದರು. ಆದರೆ ಇಲ್ಲಿ ಇನ್ನೂ ಗುಡ್ಡ ಕುಸಿತವುಂಟಾಗುವ ಭೀತಿಯಿದ್ದು ಈ ಭಾಗದಲ್ಲಿ ಓಡಾಟ ನಡೆಸುವ ವಾಹನ ಸಮಾರರು ಭಯಭೀತರಾಗುವಂತೆ ಮಾಡಿದೆ.//////