Belagavi News In Kannada | News Belgaum

ಪಾಲಿಕೆ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ನಿಷೇಧಕ್ಕೆ ಕ್ರಮ

ಬೆಳಗಾವಿ: ಏಕ ¨ಳಕೆ ಪ್ಲಾಸ್ಟಿಕ್ ನ ಬಳಕೆಯನ್ನು 2022 ರೊಳಗಾಗಿ ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಆದೇಶಿಸಿದ ಹಿನ್ನೆಲೆಯಲ್ಲಿ ಬೆಳಗಾವಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಡೆಸುತ್ತಿರುವ ಎಲ್ಲ ಬಗೆಯ ಅಂಗಡಿ ಮುಂಗಟ್ಟುಗಳು, ವ್ಯಾಪಾರ-ವಹಿವಾಟುಗಳಲ್ಲಿ ನಿಷೇಧಿತ ಪ್ಲಾಸ್ಟಿಕ್ ಬಳಕೆ ಮಾಡುವುದನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ಈಗಾಗಲೇ ಮಹಾನಗರ ಪಾಲಿಕೆ ವತಿಯಿಂದ ಪ್ಲಾಸ್ಟಿಕ್ ತಯಾರಕರು, ದಾಸ್ತಾನುದಾರರು ಹಾಗೂ ಮಾರಾಟಗಾರರ ಸ್ಥಳಗಳ ಮೇಲೆ ದಾಳಿ ಮಾಡಿ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ಮುಟ್ಟುಗೋಲು ಹಾಕಿ, ದಂಡ ವಿಧಿಸುವ ಮೂಲಕ ಅನುಷ್ಠಾನಗೊಳಿಸಲಾಗುತ್ತಿದೆ. ಪ್ಲಾಸ್ಟಿಕ್ ಕ್ಯಾರಿಭ್ಯಾಗ್ ಬಳಕೆ ಮಾಡುವ ಅಂಗಡಿ ಮಾಲೀಕರಿಗೆ ಮತ್ತೋಮೆ ಎಚ್ಚರಿಕರ ನೀಡುತ್ತ ಯಾವುದೇ ರೀತಿಯ ಪ್ಲಾಸ್ಟಿಕ್ ಬಳಕೆ ಕಂಡು ಬಂದಲ್ಲಿ ನಿಯಮಾನುಸಾರ ಕ್ರಮಜರುಗಿಸಲಾಗುವುದು.

ನಿಷೇಧಿತ ಪ್ಲಾಸ್ಟಿಕ್ ಕ್ಯಾರಿಭ್ಯಾಗ್ ಮತ್ತು ಇತರೆ ಪ್ಲಾಸ್ಟಿಕ್ ವಸ್ತುಗಳನ್ನು ಬಳಸುವುದು ಅಥವಾ ಉಪಯೋಗಿಸುವುದು ಸರ್ಕಾರಿ ಅದೇಶದ ಉಲ್ಲಂಘನೆಯಾಗುತ್ತಿದ್ದು, ಸಾರ್ವಜನಿಕರು ತಾವು ದಿನನಿತ್ಯ ಉಪಯೋಗಿಸುವ ವಸ್ತುಗಳನ್ನು ಕೊಂಡೊಯ್ಯಲು ಪರ್ಯಾಯವಾಗಿ ಬಟ್ಟೆ ಚೀಲಗಳನ್ನು /ಪೇಪರ್ ಬ್ಯಾಗ್ ಬಳಸಿ ಪರಿಸರ ಮಾಲಿನ್ಯ ತಡೆಗಟ್ಟುವಲ್ಲಿ ಮಹಾನಗರ ಪಾಲಿಕೆಯೊಂದಿಗೆ ಸಹಕರಿಸಲು ವಿನಂತಿಸಿದೆ. ಇನ್ನು ಮುಂದೆ ಸಾರ್ವಜನಿಕ ಸ್ಥಳಗಳಲ್ಲಿ ನಾಗರಿಕರಿಂದ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಬಳಕೆ ಕಂಡು ಬಂದಲ್ಲಿ ಮಹಾನಗರ ಪಾಲಿಕೆಯ ಆರೋಗ್ಯ ನಿರೀಕ್ಷಕರು/ನಿರೀಕ್ಷಕರನ್ನೊಳಗೊಂಡ ತಂಡಗಳು ನಿಯತಕಾಲಿಕವಾಗಿ ತಪಾಸಣೆ ಕೈಗೊಂಡು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ಹಾಗೂ ನಿಯಮಾನುಸಾರ ದಂಡ ವಿಧಿಸುವ ಕ್ರಮವನ್ನು ಕೈಗೊಳ್ಳಲಾಗುತ್ತದೆ ಎಂದು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ./////