ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ, ಪರಿಶೀಲನೆ
ಯೋಜನಾ ಫಲಾನುಭವಿಗಳಿಂದ ಮಾಹಿತಿ ಪಡೆದ ಕೇಂದ್ರ ಸಚಿವ ಸೋಮ ಪ್ರಕಾಶ್

ಬೆಳಗಾವಿ; ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ರಾಜ್ಯ ಸಚಿವ ಸೋಮ ಪ್ರಕಾಶ್ ಅವರು ಮಂಗಳವಾರ (ಜೂ.28) ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ, ಕೇಂದ್ರ ಸರ್ಕಾರದ ಯೋಜನೆಗಳ ಸಮರ್ಪಕ ಬಳಕೆಯ ಕುರಿತು ಪರಿಶೀಲನೆ ನಡೆಸಿದರು ಹಾಗೂ ಯೋಜನೆಗಳ ಫಲಾನಭವಿಗಳಿಂದ ಮಾಹಿತಿ ಪಡೆದರು.
ಇದೆ ಸಂದರ್ಭದಲ್ಲಿ ಕಡೂರು ಮಾರ್ಗವಾಗಿ ಬಂಬರಗಾ ಪಂಚಾಯತಿಯ ವ್ಯಾಪ್ತಿಯಲ್ಲಿ ಬರುವ ನರೇಗಾ ಮತ್ತು ಎನ್.ಆರ್.ಜಿ ಕಾಮಗಾರಿಗಳನ್ನು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ರಾಜ್ಯ ಸಚಿವ ಸೋಮ ಪ್ರಕಾಶ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರು ಪರಿಶೀಲಿಸಿದರು.
ಅದೇ ರೀತಿ ಬಂಬರಗಾ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಗೋಡಿಹಾಳ ಗ್ರಾಮದ ಬಾವಿ ಕೊಳ ಎನ್ನುವ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಗಳನ್ನು ಪರಿಶೀಲಿಸಿದರು ಈ ಸಮಯದಲ್ಲಿ ಮಾಜಿ ಶಾಸಕರಾದ ಸಂಜಯ್ ಪಾಟೀಲ್ ಅಣ್ಣಾಸಾಬ್ ಜಿಲ್ಲೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕಾಧಿಕಾರಿ ದರ್ಶನ್ ಹೆಚ್. ವಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ತಿತರಿದ್ದರು.