Belagavi News In Kannada | News Belgaum

1 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ಪಿ ಎಸ್ ಐ ಓರ್ವರನ್ನು ಎಸಿಬಿ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದಿರುವ ಘಟನೆ

ಬೆಂಗಳೂರು: 1 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ಪಿ ಎಸ್ ಐ ಓರ್ವರನ್ನು ಎಸಿಬಿ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರು ಮೆಟ್ರೋಪಾಲಿಟನ್ ಟಾಸ್ಕ್ ಫೋರ್ಸ್ ಪಿಎಸ್ ಐ ಬೇಬಿ ಓಲೇಕರ್ ಅವರು ಜಮೀನು ವಿಚಾರ ಬಗೆಹರಿಸಲು ಗಿರೀಶ್ ಎಂಬುವವರಿಂದ 1 ಲಕ್ಷ ರೂಪಾಯಿ ಲಂಚ ಪಡೆದುಕೊಳ್ಳುತ್ತಿದ್ದರು. ಈ ವೇಳೆ ಖಚಿತ ಮಾಹಿತಿ ಮೇರೆಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಪಿಎಸ್ ಐ ಬೇಬಿ ಓಲೇಕರ್ ಅವರನ್ನು ಬಂಧಿಸಿದ್ದಾರೆ.

ಹೊರಮಾವು ಬಳಿಯ ಜಮೀನು ವ್ಯಾಜ್ಯಕ್ಕೆ ಸಂಬಂಧಿಸಿದಂತೆ ಗಿರೀಶ್ ಎಬುವವರಿಗೆ ಪಿಎಸ್ ಐ ಬೇಬಿ ಓಲೆಕರ್ 3 ಲಕ್ಷ ಲಂಚದ ಬೇಡಿಕೆ ಇಟ್ಟಿದ್ದರು. ಮುಂಗಡವಾಗಿ 1 ಲಕ್ಷ ರೂಪಾಯಿ ಸ್ವೀಕರಿಸುತ್ತಿದ್ದ ವೇಳೆ ದಾಳಿ ನಡೆಸಿರುವ ಎಸಿಬಿ ಅಧಿಕಾರಿಗಳು ಭ್ರಷ್ಟ ಅಧಿಕಾರಿಯನ್ನು ಬಂಧಿಸಿದ್ದಾರೆ.