ರಾಜ್ಯದಲ್ಲಿ ಇನ್ನೂ 5 ದಿನ ಭಾರೀ ಮಳೆ: ಬೆಳಗಾವಿ ಜಿಲ್ಲೆಗೆ`ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಇನ್ನೂ 5 ದಿನ ಭಾರೀ ಮಳೆಯಾಗಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಬಗ್ಗೆ ಮಾಹಿತಿ ಬಿಡುಗಡೆ ಮಾಡಿರುವಂತ ರಾಜ್ಯ ಹವಾಮಾನ ಇಲಾಖೆಯು ಅರಬ್ಬೀ ಸಮುದ್ರದಲ್ಲಿನ ಮೇಲ್ಮೈ ಸುಳಿಗಾಳಿಯ ಪರಿಣಾಮದಿಂದಾಗಿ ರಾಜ್ಯಾಧ್ಯಂತ ಇನ್ನೂ ಐದು ದಿನ ಭಾರೀ ಮಳೆಯಾಗಲಿದೆ ಎಂಬುದಾಗಿ ತಿಳಿಸಿದೆ.
ಕರಾವಳಿ ಭಾಗದ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಪರಿಣಾಮ ರೆಡ್ ಅಲರ್ಟ್ ಘೋಷಿಸಿದೆ. ದಕ್ಷಿಣ ಒಳನಾಡಿನಲ್ಲಿ ಮೂರು ದಿನ ಆರೆಂಜ್ ಅಲರ್ಟ್ ನೀಡಿದೆ.
ಈಗಾಗಲೇ ಭಾರೀ ಮಳೆಗೆ ತತ್ತರಿಸಿರುವ ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ಮಂಗಳವಾರದ ತನಕ ರೆಡ್ ಅಲರ್ಟ್ ಘೋಷಿಸಲಾಗಿದೆ. ಮಲೆನಾಡಿನ ಜಿಲ್ಲೆಗಳಾದ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗೆ ಭಾರೀ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ನೀಡಲಾಗಿದೆ. ಭಾನುವಾರ ಹಾಸನ, ಹಾವೇರಿ, ಧಾರವಾಡ, ಬೆಳಗಾವಿ, ವಿಜಯಪುರ, ಯಾದಗಿರಿ, ಕಲಬುರಗಿ ಮತ್ತು ಬೀದರ್ ಜಿಲ್ಲೆಗೆ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇನ್ನೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಐದು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಕೂಡ ಇನ್ನೂ ಐದು ದಿನ ಮಳೆಯಾಗುವ ಮುನ್ಸೂಚನೆ ನೀಡಿದೆ. ಸಂಜೆಯ ವೇಳೆಗೆ ಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.//////