Belagavi News In Kannada | News Belgaum

ಪೆಟ್ರೋಲ್‌ಗೆ 5 ಡೀಸೆಲ್‌ಗೆ 3 ರೂ. ಇಳಿಕೆ

ಮುಂಬೈ: ಮಹಾರಾಷ್ಟ್ರದಲ್ಲಿ ಪ್ರತಿ ಲೀಟರ್‌ ಪೆಟ್ರೋಲ್‌ಗೆ ₹5 ಮತ್ತು ಡೀಸೆಲ್‌ಗೆ ₹3 ಇಳಿಕೆಯಾಗಿದೆ.

ಈ ಕುರಿತು ಗುರುವಾರ ನಡೆದ ಮಹಾರಾಷ್ಟ್ರ ರಾಜ್ಯ ಸರ್ಕಾರದ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ತೆರಿಗೆ ಕಡಿತದಿಂದ ರಾಜ್ಯ ಸರ್ಕಾರಕ್ಕೆ ವಾರ್ಷಿಕ ₹6000 ಕೋಟಿ ಹೆಚ್ಚಿನ ಹೊರೆ ಬೀಳಲಿದೆ.

ಮುಖ್ಯಮಂತ್ರಿ ಏಕನಾಥ ಶಿಂಧೆ ನೇತೃತ್ವದ ನೂತನ ಸರ್ಕಾರವು ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ವ್ಯಾಟ್ ಕಡಿತಗೊಳಿಸಿದೆ./////