Belagavi News In Kannada | News Belgaum

ಭಯೋತ್ಪಾದಕರ ಗುಂಡಿಗೆ ಸಿಆರ್‌ಪಿಎಫ್ ಯೋಧ ಹುತಾತ್ಮ

ಶ್ರೀನಗರ: ಭಾನುವಾರ ಭಯೋತ್ಪಾದಕರ ಗುಂಡಿನ ದಾಳಿಗೆ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಯೋಧರೊಬ್ಬರು ಹುತಾತ್ಮರಾಗಿರುವ ಘಟನೆ ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಗೊಂಗೂ ಕ್ರಾಸಿಂಗ್ ಬಳಿ ನಡೆದಿದೆ.

ಪುಲ್ವಾಮಾ ಜಿಲ್ಲೆಯ ಪೊಲೀಸ್ ಹಾಗೂ ಸಿಆರ್‌ಪಿಎಫ್ ಜಂಟಿ ನಾಕಾ ಪಾರ್ಟಿ(ಚೆಕ್ ಫೋಸ್ಟ್) ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು, ಸಿಆರ್‌ಪಿಎಫ್ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಹುತಾತ್ಮರಾಗಿದ್ದಾರೆ.

ಚೆಕ್‌ಪೋಸ್ಟ್ ಮೇಲೆ ಸಮೀಪದ ಸೇಬಿನ ತೋಟದಿಂದ ಗುಂಡಿನ ದಾಳಿ ನಡೆಸಲಾಗಿದ್ದು, ಘಟನೆಯಲ್ಲಿ ಸಿಆರ್‌ಪಿಎಫ್ ಸಿಬ್ಬಂದಿ ತೀವ್ರವಾಗಿ ಗಾಯಗೊಂಡಿದ್ದರು. ಅವರನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಘಟನಾ ಪ್ರದೇಶದಲ್ಲಿ ಭದ್ರತಾ ಪಡೆ ಸುತ್ತುವರಿದಿದ್ದು, ಉಗ್ರರನ್ನು ಪತ್ತೆ ಹಚ್ಚಲು ಹಾಗೂ ಬಂಧಿಸಲು ಪ್ರಯತ್ನಿಸಲಾಗುತ್ತಿದೆ ಎನ್ನಲಾಗಿದೆ.//////