Belagavi News In Kannada | News Belgaum

ಜಯದೇವ ಆಸ್ಪತ್ರೆಯ ನಿರ್ದೇಶಕ ಡಾ. ಮಂಜುನಾಥ್ ಸೇವಾವಧಿ ವಿಸ್ತರಣೆ

ಬೆಂಗಳೂರು: ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕ ಹಾಗೂ ಖ್ಯಾತ ಹೃದಯ ತಜ್ಞ ಡಾ. ಮಂಜುನಾಥ್ ಅವರ ಸೇವಾವಧಿಯನ್ನು ಪುನಃ ಒಂದು ವರ್ಷಕ್ಕೆ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ನಿರ್ದೇಶಕರಾಗಿ ಅವಧಿ ಮುಕ್ತಾಯಗೊಂಡಿರುವ ಹಿನ್ನೆಲೆಯಲ್ಲಿ ಪುನಃ ಅವರನ್ನೇ ಮುಂದುವರಿಸುವಂತೆ ಕೆಲವರು ಮನವಿ ಮಾಡಿಕೊಂಡಿದ್ದರು. ಹೀಗಾಗಿ ಅವರ ಸೇವಾವಧಿ ವಿಸ್ತರಿಸಲಾಗಿದೆ.

ಈ ವಿಷಯವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಖುದ್ದಾಗಿ ಡಾ.ಸಿ.ಎನ್. ಮಂಜುನಾಥ್ ಅವರಿಗೆ ಕರೆ ಮಾಡಿ ತಿಳಿಸಿದ್ದಾರೆ. ಡಾ. ಮಂಜುನಾಥ್ ಸೇವಾವಧಿ ಇಂದಿಗೆ ಮುಕ್ತಾಯಗೊಳ್ಳುತ್ತಿತ್ತು. ತಮ್ಮ ಸೇವಾವಧಿ ವಿಸ್ತರಿಸಿದ್ದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಅವರಿಗೆ ಮಂಜುನಾಥ್ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.

ಜಯದೇವ ಆಸ್ಪತ್ರೆ ನಿರ್ದೇಶಕ ಸಿ.ಎನ್.ಮಂಜುನಾಥ್ ಅವರ ಅವಧಿ ಮುಗಿದಿತ್ತು. ಅವರನ್ನೇ ಮುಂದುವರಿಸಬೇಕು ಎಂದು ಸಾರ್ವಜನಿಕ ವಲಯದಲ್ಲಿ ಒತ್ತಾಯ ವ್ಯಕ್ತವಾಗಿತ್ತು. ಮಂಜುನಾಥ್ ಅವರನ್ನು ಮುಂದುವರಿಸುವಂತೆ ಅನೇಕ ಕಡೆ ಪ್ರತಿಭಟನೆಗೂ ಕರೆ ನೀಡಲಾಗಿತ್ತು. ಅಷ್ಟರಲ್ಲೇ ಎಚ್ಚೆತ್ತ ಸರ್ಕಾರ ಸೇವಾವಧಿ ವಿಸ್ತರಿಸಿದೆ./////