Belagavi News In Kannada | News Belgaum

ʻಲೈಗರ್’ ಟ್ರೈಲರ್ ರಿಲೀಸ್: ಆ್ಯಕ್ಷನ್ ಅವತಾರದಲ್ಲಿ ಮಿಂಚಿದ ವಿಜಯ್

ತಮಿಳುನಾಡು: ದಕ್ಷಿಣ ಭಾರತದ ಸ್ಟಾರ್ ನಟ ವಿಜಯ್ ದೇವರಕೊಂಡ ನಟನೆಯ ಬಹುನಿರೀಕ್ಷಿತ ಚಿತ್ರ `ಲೈಗರ್’ ಟ್ರೈಲರ್ ರಿಲೀಸ್ ಆಗಿದ್ದು, ಬಾಕ್ಸರ್ ಆಗಿ ಮಿಸ್ಟರ್ ವಿಜಯ್ ದೇವರಕೊಂಡ ಅಕ್ಷರಶಃ ಅಬ್ಬರಿಸಿ ಬೊಬ್ಬಿರಿದಿದ್ದಾರೆ. ಈ ಚಿತ್ರದ ಮೂಲಕ ಕನ್ನಡ ಚಿತ್ರರಂಗದಲ್ಲೂ ʻಲೈಗರ್ʼ ಆಗಿ ವಿಜಯ್ ಸಂಚಲನ ಮೂಡಿಸಿದ್ದಾರೆ.
ವಿಜಯ್ ದೇವರಕೊಂಡ, ಪುರಿ ಜಗನ್ನಾಥ್ ಕಾಂಬಿನೇಷನ್‌ನ ಹೈವೋಲ್ಟೇಜ್ ಕಾಂಬಿನೇಶನ್ `ಲೈಗರ್’ ಸೆಟ್ಟೇರಿದ ದಿನದಿಂದಲೂ ಸಾಕಷ್ಟು ಸುದ್ದಿ ಮಾಡಿತ್ತು. ಪೋಸ್ಟರ್‌ಗಳಿಂದಲೇ ನಿರೀಕ್ಷೆ ಹೆಚ್ಚಿಸಿದ್ದ `ಲೈಗರ್’ ಟ್ರೈಲರ್ ರಿಲೀಸ್ ಆಗಿ, ಈಗ ಸಿನಿಮಾ ಮೇಲಿನ ಕ್ಯೂರಿಯಾಸಿಟಿಯನ್ನು ದುಪ್ಪಟ್ಟು ಮಾಡಿದೆ. ಮಾಸ್ ಲುಕ್‌ನಲ್ಲಿ ವಿಜಯ್ ದೇವರಕೊಂಡ ಕಾಣಿಸಿಕೊಂಡಿದ್ದು, ವಿಜಯ್‌ಗೆ ನಾಯಕಿಯಾಗಿ ಬ್ಯೂಟಿ ಕ್ವೀನ್ ಅನನ್ಯಾ ಪಾಂಡೆ ನಟಿಸಿದ್ದಾರೆ. ʻಲೈಗರ್‌ʼನಲ್ಲಿ ವಿಜಯ್ ರಗಡ್ ಆಗಿ ನಟಿಸಿದ್ದು, ಟ್ರೈಲರ್ ಪ್ರಶಂಸೆಯ ಮಹಾಪೂರವೇ ಹರಿದು ಬರುತ್ತಿದೆ.ಈ ಸಿನಿಮಾ ಮೂಲಕ ವಿಜಯ್ ದೇವರಕೊಂಡ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಬರುತ್ತಿದ್ದಾರೆ.
ತೆಲುಗು, ತಮಿಳು, ಹಿಂದಿ, ಮಲಯಾಳಂ ಹಾಗೂ ಕನ್ನಡ ಭಾಷೆಯಲ್ಲಿ ʻಲೈಗರ್‌ʼ ಚಿತ್ರ ತೆರೆ ಕಾಣುತ್ತಿದೆ. ಈ ಚಿತ್ರದಲ್ಲಿ ಬಾಕ್ಸರ್ ಪಾತ್ರದಲ್ಲಿ ವಿಜಯ್ ದೇವರಕೊಂಡ ಅಭಿನಯಿಸಿದ್ದು, ಬಹುಕೋಟಿ ವೆಚ್ಚದಲ್ಲಿ ಅದ್ಧೂರಿಯಾಗಿ ನಿರ್ಮಾಣವಾಗುತ್ತಿರುವ ಈ ಚಿತ್ರಕ್ಕೆ ಬಾಲಿವುಡ್ ಖ್ಯಾತ ನಿರ್ಮಾಣ ಸಂಸ್ಥೆ ಧರ್ಮ ಪ್ರೊಡಕ್ಷನ್ ಮತ್ತು ಪುರಿ ಕನೆಕ್ಟ್ಸ್‌ ಬಂಡವಾಳ ಹೂಡಿದ್ದಾರೆ. ವಿಶ್ವ ಬಾಕ್ಸಿಂಗ್ ಲೆಜೆಂಡ್ ಮೈಕ್ ಟೈಸನ್ ಈ ಚಿತ್ರದಲ್ಲಿ ಗೆಸ್ಟ್ ರೋಲ್‌ನಲ್ಲಿ ನಟಿಸಿದ್ದು, ರಮ್ಯಾ ಕೃಷ್ಣ ವಿಜಯ್ ದೇವರಕೊಂಡ ತಾಯಿಯಾಗಿ ಅಭಿನಯಿಸಿದ್ದಾರೆ. ಕನ್ನಡದಲ್ಲಿಯೂ ರಿಲೀಸ್ ಆಗ್ತಿರುವ ಲೈಗರ್ ಚಿತ್ರ ಆಗಸ್ಟ್ 25ಕ್ಕೆ ತೆರೆಗೆ ಅಬ್ಬರಿಸುತ್ತಿದೆ.//////