Belagavi News In Kannada | News Belgaum

ಆನೆ ದಂತ ಮಾರಾಟಕ್ಕೆ ಯತ್ನ: ಮೂವರನ್ನು ಬಂಧಿಸಿದ ಪೊಲೀಸ್‌ರು

ಮಡಿಕೇರಿ: ಎರಡು ಆನೆ ದಂತಗಳನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಮಡಿಕೇರಿ ಸಿ.ಐ.ಡಿ ಪೊಲೀಸ್ ಅರಣ್ಯ ಘಟಕವು ಮಾಲು ಸಹಿ ಬಂಧಿಸಿದೆ.

ಮಹಾದೇವಸ್ವಾಮಿ, ಗುರು.ಜಿ ಹಾಗೂ ಹೇಮಂತ್ ರಾಜ್ ಪಿ. ಬಂಧಿತ ಆರೋಪಿಗಳು.
ನಗರದ ಫೀ.ಮಾ.ಕಾರ್ಯಪ್ಪ ಕಾಲೇಜು ರಸ್ತೆಯ ಬಸ್ ತಂಗುದಾಣದ ಬಳಿ ಆನೆ ದಂತಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಸಂದರ್ಭ ಪೊಲೀಸರು ದಾಳಿ ನಡೆಸಿ ಮಾಲು ಸಹಿತ ಆರೋಪಿಗಳನ್ನು ಬಂಧಿಸಿದ್ದಾರೆ.
ಸಿ.ಐ.ಡಿ ಪೊಲೀಸ್ ಅರಣ್ಯ ಘಟಕದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಕೆ.ವಿ.ಶರತ್ ಚಂದ್ರ ಅವರ ನಿರ್ದೇಶನದ ಮೇರೆಗೆ ಮಡಿಕೇರಿ ಸಿ.ಐ.ಡಿ ಪೊಲೀಸ್ ಅರಣ್ಯ ಘಟಕದ ಪ್ರಭಾರ ಪೊಲೀಸ್ ಅಧೀಕ್ಷಕ ಶ್ರೀನಿವಾಸ್ ರೆಡ್ಡಿ ಅವರ ಮಾರ್ಗದರ್ಶನದಲ್ಲಿ ಮಡಿಕೇರಿ ಅರಣ್ಯ ಸಂಚಾರಿ
ದಳದ ಪಿ.ಎಸ್.ಐ ಸಿ.ಯು.ಸವಿ, ಹೆಡ್ ಕಾನ್ಸ್ಟೇಬಲ್‌ಗಳಾದ ಶೇಖರ್, ರಾಜೇಶ್, ರಾಘವೇಂದ್ರ, ಯೋಗೇಶ್, ಮೋಹನ ಹಾಗೂ ಕಾನ್ಸ್ಟೇಬಲ್ ಮಂಜುನಾಥ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.//////