Belagavi News In Kannada | News Belgaum

ಮತದಾರರ ಪಟ್ಟಿಗೆ ಆಧಾರ್ ಸಂಖ್ಯೆ ಜೋಡಣೆ ಪ್ರಾರಂಭೋತ್ಸವ

ಬೆಳಗಾವಿ :  ಭಾರತ ಚುನಾವಣಾ ಆಯೋಗದ ಸೂಚನೆಯಂತೆ ಮುಂದಿನ 2023ರ ಮಾರ್ಚ್ ಅಂತ್ಯಕ್ಕೆ ಮತದಾರರ ಪಟ್ಟಿಗೆ ಆಧಾರ್ ಸಂಖ್ಯೆಯನ್ನು ಜೋಡಿಸುವ ಕಾರ್ಯ ಪ್ರತಿಶತ 100ರಷ್ಟು ಪೂರ್ಣಗೊಳಿಸಬೇಕಿದೆ ಎಂದು ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಡಳಿತ, ಭಾರತ ಚುನಾವಣಾ ಆಯೋಗ ಹಾಗೂ ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಸಹಯೋಗದಲ್ಲಿ ಜಿಲ್ಲಾ ಪಂಚಾಯತ ಸಭಾಭವನದಲ್ಲಿ ಸೋಮವಾರ (ಆ.01) ನಡೆದ ಮತದಾರರ ಆಧಾರ ಸಂಖ್ಯೆಗಳನ್ನು ಮತದಾರರ ಪಟ್ಟಿಗೆ ಜೋಡಣೆ ಕಾರ್ಯದ ಪ್ರಾರಂಭೋತ್ಸವದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯ ಎಲ್ಲ ಬಿಎಲ್‍ಒಗಳು ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಫಾರ್ಮ್ 6,7 ಹಾಗೂ 8 ಇವುಗಳ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಳ್ಳಬೇಕು. ನಂತರ ಆನ್ ಲೈನ್ ಹಾಗೂ ಆಫ್ ಲೈನ್ ಮೂಲಕ ಫಾರ್ಮ್ 6(ಬಿ) ಯಲ್ಲಿ ಮತದಾರರ ಆಧಾರ್ ಸಂಖ್ಯೆಯನ್ನು ಜೋಡಿಸುವ ಕಾರ್ಯಕ್ಕೆ ಅಣಿಯಾಗಬೇಕು ಎಂದು ಅವರು ತಿಳಿಸಿದರು.
ಆಧಾರ್ ಸಂಖ್ಯೆಯನ್ನು ಜೋಡಿಸುವ ಕಾರ್ಯದಲ್ಲಿ ಯಾವುದೇ ರೀತಿಯ ಮಾಹಿತಿ, ದಾಖಲಾತಿ ಬಹಿರಂಗವಾದರೆ ಅಧಿಕಾರಿ, ಸಿಬ್ಬಂದಿಗಳು ಕಾನೂನು ರೀತಿಯಲ್ಲಿ ಶಿಕ್ಷೆಗೂ ಒಳಗಾಗಬೇಕಾಗುತ್ತದೆ. ಹೀಗಾಗಿ ನಿಗದಿತ ಅವಧಿಯಲ್ಲಿ ಮುತುವರ್ಜಿಯಿಂದ ಆಧಾರ್ ಸಂಖ್ಯೆಯನ್ನು ಜೋಡಿಸುವ ಕಾರ್ಯವನ್ನು ಯಶಸ್ವಿಗೊಳಿಸಬೇಕಾಗಿದೆ ಎಂದು ಅಶೋಕ ದುಡಗುಂಟಿ ಅವರು ಎಚ್ಚರಿಸಿದರು.
ಪ್ರಾರಂಭೋತ್ಸವ ಉದ್ಘಾಟಿಸಿ ಮಾತನಾಡಿದ ಕಾನೂನು ಸುವ್ಯವಸ್ಥೆ ಡಿಸಿಪಿ ರವೀಂದ್ರ ಗಡಾದಿ ಅವರು, ಪಾರದರ್ಶಕ ಚುನಾವಣಾ ಪ್ರಕ್ರಿಯೆ ನಡೆಸಲು ಮತದಾರರ ಪಟ್ಟಿಗೆ ಆಧಾರ್ ಸಂಖ್ಯೆಯನ್ನು ಜೋಡಿಸುವುದು ಉತ್ತಮ ಕಾರ್ಯವಾಗಿದೆ. ಚುನಾವಣೆ ಹೊತ್ತಿನಲ್ಲಿ ವೋಟರ್ ಐಡಿ ರದ್ದಾಗಿದೆ ಎಂದು ದೂರುವುದಕ್ಕಿಂತ ಈ ಹೊತ್ತಿನಲ್ಲಿಯೇ ಚುನಾವಣಾ ಆಯೋಗದ ಸೂಚನೆಯಂತೆ ಸಾರ್ವಜನಿಕರು ನಿಯಮಾನುಸಾರ ಅಧಿಕೃತ ಮತಚೀಟಿ ಹೊಂದಬೇಕು ಎಂದು ತಿಳಿಸಿದರು.
ಅತಿಥಿಯಾಗಿ ಮಾತನಾಡಿದ ಬೆಳಗಾವಿ ಜಿಲ್ಲಾ ಹೆಚ್ಚುವರಿ ಪೆÇಲೀಸ್ ವರಿμÁ್ಠಧಿಕಾರಿ ಮಹಾನಂದ ನಂದಗಾವಿ ಅವರು, ವೋಟರ್ ಐಡಿಗೆ ಆಧಾರ್ ಸಂಖ್ಯೆಯನ್ನು ಜೋಡಿಸುವ ಕಾರ್ಯ ಉತ್ತಮವಾಗಿದೆ. ಅಧಿಕೃತ ವೋಟರ್ ಐಡಿಯೊಂದಿಗೆ ಮತದಾರರು ಮತ ಚಲಾಯಿಸಲು ಈ ಪ್ರಕ್ರಿಯೆ ಸಹಾಯಕವಾಗಲಿದೆ ಎಂದು ಹೇಳಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತರಾದ ರುದ್ರೇಶ ಘಾಳಿ ಅವರು, ಮತದಾರರ ಪಟ್ಟಿಗೆ ಆಧಾರ್ ಸಂಖ್ಯೆಯನ್ನು ಸೇರಿಸುವ ಮೂಲಕ ನಕಲಿ ವೋಟರ್ ಐಡಿಗಳನ್ನು ತಡೆಗಟ್ಟಬಹುದು. ಮತ ಪ್ರಕ್ರಿಯೆಯನ್ನೂ ಪಾರದರ್ಶಕತೆಯೊಂದಿಗೆ ನಡೆಸಬಹುದು ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಈಶ್ವರ ಉಳ್ಳಾಗಡ್ಡಿ, ಮಹಾನಗರ ಪಾಲಿಕೆ ಅಧೀಕ್ಷಕ ಅಭಿಯಂತರರಾದ ಮಹಾವೀರ ಗಣಿ ಹಾಗೂ ಇತರ ಅಧಿಕಾರಿಗಳು, ಸಿಬ್ಬಂದಿಗಳು, ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಮಹಾನಗರ ಪಾಲಿಕೆ ಆಡಳಿತ ವಿಭಾಗದ ಉಪ ಆಯುಕ್ತರಾದ ಭಾಗ್ಯಶ್ರೀ ಹುಗ್ಗಿ ಸ್ವಾಗತಿಸಿದರು, ಸುನೀತಾ ದೇಸಾಯಿ ನಿರೂಪಿಸಿದರು, ಮಹಾನಗರ ಪಾಲಿಕೆ ಕಂದಾಯ ವಿಭಾಗದ ಉಪ ಆಯುಕ್ತರಾದ ಪ್ರಶಾಂತ ಹನಗಂಡಿ ವಂದಿಸಿದರು.//////