Belagavi News In Kannada | News Belgaum

ತೆರೆ ಮರೆಯ ಸ್ವಾತಂತ್ರ್ಯ ಹೋರಾಟಗಾರರನ್ನೂ ಸ್ಮರಿಸಿ, ಗೌರವಿಸಬೇಕಿದೆ – ಚನ್ನರಾಜ ಹಟ್ಟಿಹೊಳಿ

ಬೈಲಹೊಂಗಲ – ಸ್ವಾತಂತ್ರ್ಯ ಹೋರಾಟದಲ್ಲಿ ಬೆಳಗಾವಿ ಜಿಲ್ಲೆಯ ಕೊಡುಗೆ ದೊಡ್ಡ ಮಟ್ಟದಲ್ಲಿದ್ದು, ಪ್ರತಿ ಹಳ್ಳಿ ಹಳ್ಳಿಯಿಂದ ಜನರು ಸ್ವಾತಂತ್ರ್ಯಕ್ಕಾಗಿ ತ್ಯಾಗ ಮಾಡಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹೇಳಿದರು.

ಸ್ವಾತಂತ್ರ್ಯ ಹೋರಾಟಗಾರ ವೀರಕೇಸರಿ ಅಮಟೂರ ಬಾಳಪ್ಪ ಟ್ರಸ್ಟ್ ಕಮೀಟಿಯ ಸಹಯೋಗದಲ್ಲಿ ಶುಕ್ರವಾರ ನಡೆದ 75 ನೇಯ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವ ಹಾಗೂ 23ನೇ ಕಾರ್ಗಿಲ್ ವಿಜಯೋತ್ಸವ ಮತ್ತು ಸಾಧಕರಿಗೆ ಏರ್ಪಡಿಸಲಾಗಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಭಾಗಿಯಾಗಿ ಅವರು ಮಾತನಾಡಿದರು. ನಾವು ಸ್ವಾತಂತ್ರ್ಯ ಹೋರಾಟಗಾರರೆಂದು ನಾಯಕತ್ವ ವಹಿಸಿದ ಕೆಲವೇ ಕೆಲವರನ್ನು ಸ್ಮರಿಸುತ್ತೇವೆ. ಆದರೆ ಅವರ ಜೊತೆಗೆ ಲಕ್ಷಾಂತರ ಜನರು ಪ್ರತ್ಯಕ್ಷವಾಗಿ, ಪರೋಕ್ಷವಾಗಿ ಹೋರಾಟದಲ್ಲಿ ತೊಡಗಿಸಿಕೊಂಡಿದ್ದರು. ಮಹಿಳೆ.ರು ಕೂಡ ತೆರೆ ಮರೆಯಲ್ಲಿ ತಮ್ಮ ಕೊಡುಗೆ ನೀಡಿದ್ದಾರೆ. ಅಂತವರಿಗೆಲ್ಲ ನಮ್ಮ ಗೌರವ ನಮನ ಸಲ್ಲಿಸಬೇಕಾಗಿದೆ ಎಂದು ಅವರು ಹೇಳಿದರು.

ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಮಮದಾಪೂರದ ಶ್ರೀ ಮೌನ ಮಲ್ಲಿಕಾರ್ಜುನ ಶಿವಯೋಗಿಗಳು , ಬೈಲಹೊಂಗಲ ಮೂರುಸಾವಿರ ಮಠದ ಶ್ರೀ ಪ್ರಭು ನೀಲಕಂಠ ಮಹಾಸ್ವಾಮಿಗಳು , ರಾಜಯೋಗಿನಿ ಬ್ರಹ್ಮಕುಮಾರಿ ಪ್ರಭಾಮಾತಾಜಿ ಇವರುಗಳು ವಹಿಸಿದ್ದರು.

ಈ ಸಂದರ್ಭದಲ್ಲಿ ಪಂಚನಗೌಡ ದ್ಯಾಮನಗೌಡರ, ಬಸವರಾಜ ಜನ್ಮಟ್ಟಿ, ಮಹಾಂತೇಶ ಮತ್ತಿಕೊಪ್ಪ, ಸಾಹಿತ್ಯ ಆಲದಕಟ್ಟಿ ಮೊದಲಾದವರು ಉಪಸ್ಥಿತರಿದ್ದರು./////