Belagavi News In Kannada | News Belgaum

ಸಿಎಂ ಬೊಮ್ಮಾಯಿಗೆ ಸೋಂಕು ದೃಢ : ದೆಹಲಿ ಪ್ರವಾಸ ರದ್ದು

ಬೆಂಗಳೂರು : ಸಿಎಂ ಬಸವರಾಜ ಬೊಮ್ಮಾಯಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಕೋವಿಡ್​ ಸೋಂಕು ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿಯವರ ದೆಹಲಿ ಪ್ರವಾಸ ರದ್ದಾಗಿದೆ. ತಮಗೆ ಕೋವಿಡ್​ ದೃಢಪಟ್ಟಿರುವ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಟ್ವೀಟ್​ ಮೂಲಕ ಮಾಹಿತಿ ನೀಡಿದ್ದಾರೆ.

ನನಗೆ ಇಂದು ಕೋವಿಡ್-19 ಸೋಂಕು ದೃಢಪಟ್ಟಿದ್ದು, ಆರೋಗ್ಯವಾಗಿ ಇದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ. ನನ್ನ ದೆಹಲಿಯ ಪ್ರವಾಸ ರದ್ದಾಗಿರುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.//////