Belagavi News In Kannada | News Belgaum

ಅಂಗನವಾಡಿ ಕಾರ್ಯಕರ್ತೆ 12 ಸಹಾಯಕಿಯರ ನೇಮಕ: ಅರ್ಜಿ ಆಹ್ವಾನ

02 ಅಂಗನವಾಡಿ ಕಾರ್ಯಕರ್ತೆ 12 ಸಹಾಯಕಿಯರ ನೇಮಕ: ಅರ್ಜಿ ಆಹ್ವಾನ

ಬೆಳಗಾವಿ,ಆ.08 :ರಾಯಬಾಗ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯ ಗ್ರಾಮಗಳಲ್ಲಿ/ನಗರ ಪ್ರದೇಶಗಳಲ್ಲಿ ಖಾಲಿ ಇರುವ 02 ಅಂಗನವಾಡಿ ಕಾರ್ಯಕರ್ತೆ ಮತ್ತು 12 ಸಹಾಯಕಿಯರ ಹುದ್ದೆಗಳ ಆಯ್ಕೆಗಾಗಿ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ 04 ಆಗಸ್ಟ್ 2022 ಹಾಗೂ ಕೊನೆಯ ದಿನಾಂಕ 05 ಸೆಪ್ಟೆಂಬರ್ 2022 ಆಗಿರುತ್ತದೆ. ಹುದ್ದೆ ಖಾಲಿ ಇರುವ ಗ್ರಾಮೀಣ/ನಗರ ಪ್ರದೇಶಗಳಲ್ಲಿ ಅದೇ ಗ್ರಾಮದ ಇಚ್ಛೆಯುಳ್ಳ ಅಭ್ಯರ್ಥಿಗಳು ವೆಬ್‍ಸೈಟ್ ವಿಳಾಸ anganwadiruit.kar.nic.in ನಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ರಾಯಬಾಗ ಸಂಪರ್ಕಿಸಬಹುದು ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.///

ಅಂಗನವಾಡಿ ಕಾರ್ಯಕರ್ತೆಯರು-ಸಹಾಯಕಿಯರ ನೇಮಕ: ಅರ್ಜಿ ಆಹ್ವಾನ

ಬೆಳಗಾವಿ,ಆ.08 : ಕಾಗವಾಡ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಖಾಲಿ ಇರುವ 02 ಅಂಗನವಾಡಿ ಕಾರ್ಯಕರ್ತೆಯ ಹುದ್ದೆಗೆ ಹಾಗೂ 11 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ 18-35 ವರ್ಷದೊಳಗಿನ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್‍ಲೈನ್ (Online) ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ 04 ಆಗಸ್ಟ್ 2022 ಆಗಿದ್ದು, ಆನ್‍ಲೈನ್ ವಿಳಾಸ anganwadirecruit.kar.nic.in ಆಸಕ್ತ ಮಹಿಳೆಯರು ತಮ್ಮ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ದಿನಾಂಕ 05 ಸೆಪ್ಟೆಂಬರ್ 2022 ರೊಳಗೆ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ ಕಾಗವಾಡ ,ರಜೆ ದಿನಗಳನ್ನು ಹೊರತುಪಡಿಸಿ ಕಛೇರಿ ವೇಳೆಯಲ್ಲಿ ದೂರವಾಣಿ ಸಂಖ್ಯೆ 08339-264977 ಸಂಪರ್ಕಿಸಬಹುದು. ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ .///

10 ರಂದು ಡಿ.ದೇವರಾಜ ಅರಸು ಜನ್ಮದಿನಾಚರಣೆ ಪೂರ್ವಭಾವಿ ಸಭೆ

ಬೆಳಗಾವಿ ,ಆ.8  : ಮಾಜಿ ಮುಖ್ಯ ಮಂತ್ರಿ ಡಿ. ದೆವರಾಜ ಅರಸು 107 ನೇಯ ಜನ್ಮ ದಿನಾಚರಣೆಯ ಪೂರ್ವಭಾವಿ ಸಭೆ 10 ರಂದು ಮುಂಜಾನೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ 2 ನೇ ಮಹಡಿಯ ಸಭಾ ಭವನಲ್ಲಿ ಹಮ್ಮಿಕೂಳ್ಳಲಾಗಿದೆ.
ಪೂರ್ವಭಾವಿ ಸಭೆಗೆ ಜಿಲ್ಲಾಯ ಜನಪ್ರತಿನಿಧಿಗಳು ಮತ್ತು ಸಂಘ ಸಂಸ್ಥೆಗಳ ಪ್ರದಾಧಿಕಾರಿಗಳು ಹಾಗೂ ಅಭಿಮಾನಿಗಳು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದು ಸೂಕ್ತ ಸಲಹೆ ಸೂಚನೆಗಳು ನೀಡಬೇಕು ಎಂದು ಹಿಂದುಳಿದ ವರ್ಗಗಳು ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ///

ಆ ,10 ರಂದು ಭಾರತ ಸಾತ್ರಂತ್ರ್ಯ ದಿನಾಚರಣೆಯ ಪೂರ್ವಭಾವಿ ಸಿದ್ದತೆ ಸಭೆ

ಬೆಳಗಾವಿ ,ಆ 8  ಬೆಳಗಾವಿ ಮಹಾನಗರ ಪಾಲಿಕೆ ವತಿಯಿಂದ ಆ 10 ರಂದು ಮುಂಜಾನೆ 11:30 ಗಂಟೆಗೆ ಮಹಾ ನಗರ ಪಾಲಿಕೆ ಆಯುಕ್ತರ ಅಧಕ್ಷತೆಯಲ್ಲಿ ಮಹಾ ನಗರ ಪಾಲಿಕೆ ಪರಿಷತ್ ಸಭಾಂಗಣದಲ್ಲಿ ಭಾರತ ಸ್ವಾತಂತ್ರ್ಯ ದಿನಾಚರಣೆಯ ಪೂರ್ವಭಾವಿ ಸಿದ್ದತೆ ಸಭೆ ಹಮ್ಮಿಕೂಳ್ಳಲಾಗಿದೆ, ಪೂರ್ವಭಾವಿ ಸಭೆಗೆ ಸ್ವಾಗತ ಸಮಿತಿ ಸದಸ್ಯರು ಹಾಗೂ ಅಧಿಕಾರಿಗಳು ಹಾಜರಿದ್ದು ಸೂಕ್ತ ಸಲಹೆ ಸೂಚನೆಗಳು ನೀಡಬೇಕು ಎಂದು ಬೆಳಗಾವಿ ಮಹಾ ನಗರದ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ////

 

41 ಬೆಳಗಾವಿಯಲ್ಲಿ ಆ 8 ರಿಂದ 10 ರ ವರಗೆ ಮದ್ಯ ಮಾರಾಟ ನಿಷೇಧ : ನಗರ ಪೆÇಲೀಸ್ ಆಯುಕ್ತ ಡಾ.ಬೋರಲಿಂಗಯ್ಯ ಆದೇಶ

ಬೆಳಗಾವಿ ಜುಲೈ 08  : ಬೆಳಗಾವಿ ಜಿಲ್ಲೆಯಲ್ಲಿ ಆ 8 ರಂದು ರಂದು ರಾತ್ರಿ 12 ಗಂಟೆಯಿಂದ ಆ 10, ಬೆಳಿಗ್ಗೆ 6 ಗಂಟೆಯ ವರಗೆರ ಮೋಹರಂ ಹಬ್ಬ ಆಚರಿಸುವ ನಿಮಿತ್ಯ, ಬೆಳಗಾವಿ ನಗರ ಮತ್ತು ಬೆಳಗಾವಿ ತಾಲೂಕಿನಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಹಾಗೂ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಮದ್ಯ ಮಾರಟ  ನಿಷೇಧಿಸಲು ನಗರ ಪೆÇಲೀಸ್ ಆಯುಕ್ತರಾದ ಡಾ.ಬೋರಲಿಂಗಯ್ಯ ಅವರು ಆದೇಶ ಹೋರಡಿಸಿದ್ದಾರೆ.
ಮದ್ಯ ಮಾರಾಟದ ಅಂಗಡಿಗಳು, ಬಾರ್/ರೆಸ್ಟೋರೆಂಟ್ ಗಳು, ಕ್ಲಬ್ ಗಳು ಹಾಗೂ ದಾಸ್ತಾನು ಡಿಪೆÇೀಗಳನ್ನು, ಹೊಟೇಲ್ ಗಳಲ್ಲಿರುವ ಬಾರ್ ಗಳನ್ನು ಮುಚ್ಚತಕ್ಕದ್ದು ಹಾಗೂ ಎಲ್ಲ ಅಬಕಾರಿ ಸನ್ನದು ಅಂಗಡಿಗಳನ್ನು ಮುಚ್ಚಿ ಸೀಲ್ ಹಾಕಬೇಕು.
ಪರಿಸ್ಥಿತಿ ಅನುಗುಣವಾಗಿ ಸಾರ್ವಜನಿಕ ಶಾಂತತೆಯನ್ನು ಕಾಯ್ದುಕೊಂಡು ಬರುವ ಹಿತದೃಷ್ಟಿಯಿಂದ ಅಬಕಾರಿ ಇನ್ಸ್ ಪೆಕ್ಟರ್ ಹಾಗೂ ಉಪ-ವಿಭಾಗದ ಅಬಕಾರಿ ಅಧೀಕ್ಷಕರು, ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ 21(2) ಹಾಗೂ ಕರ್ನಾಟಕ ಪೆÇಲೀಸ್ ಕಾಯ್ದೆ 1963 ಕಲಂ 31 ರ ಪ್ರಕಾರ ಅವಶ್ಯಕತೆ ಕಂಡುಬಂದಲ್ಲಿ ಶಾಂತಿಪಾಲನೆಗಾಗಿ ಸೂಕ್ತ ಕ್ರಮ ಕೈಗೊಳ್ಳಬೇಕು.
ಅಬಕಾರಿ ಉಪ-ಆಯುಕ್ತರು, ಬೆಳಗಾವಿ ತಾಲೂಕು ಮತ್ತು ಉಪ ಪೆÇಲೀಸ್ ಆಯುಕ್ತರು(ಕಾ ಮತ್ತು ಸು), ಬೆಳಗಾವಿ ನಗರ ಹಾಗೂ ಅವರ ಅಧೀನ ಅಧಿಕಾರಿಗಳು, ಬೆಳಗಾವಿ ಹೆಚ್ಚುವರಿ ಅಬಕಾರಿ ಅಧೀಕ್ಷಕರು ಮತ್ತು ಅಬಕಾರಿ ಉಪ ಅಧೀಕ್ಷಕರು ಇವರುಗಳು ತಮ್ಮ ವ್ಯಾಪ್ತಿಯನ್ನು ಅಧಿಸೂಚನೆಯನ್ನು ಸೂಕ್ತ ರೀತಿಯಲ್ಲಿ ಪಾಲಿಸಬೇಕು.
ಈ ಆದೇಶವನ್ನು ಉಲ್ಲಂಘನೆ ಮಾಡಿದಲ್ಲಿ ಸಂಬಂಧಪಟ್ಟವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ನಗರ ಪೆÇಲೀಸ್ ಆಯುಕ್ತರಾದ ಡಾ.ಬೋರಲಿಂಗಯ್ಯ ಅವರು ಆದೇಶವನ್ನು ಹೋರಡಿಸಿದ್ದಾರೆ.///

 

ಅಂಗನವಾಡಿ ಸಹಾಯಕಿಯರ ನೇಮಕ: ಅರ್ಜಿ ಆಹ್ವಾನ

ಬೆಳಗಾವಿ,ಆ.08: ನಿಪಾಣಿ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಖಾಲಿ ಇರುವ 31 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ 18-35 ವರ್ಷದೊಳಗಿನ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್‍ಲೈನ್ (ಔಟಿಟiಟಿe) ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ 04 ಆಗಸ್ಟ್ 2022 ಆಗಿದ್ದು, ಆನ್‍ಲೈನ್ ವಿಳಾಸ anganwadirecruit.kar.nic.in ಆಸಕ್ತ ಮಹಿಳೆಯರು ತಮ್ಮ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ದಿನಾಂಕ 05 ಸೆಪ್ಟೆಂಬರ್ 2022 ರೊಳಗೆ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ ನಿಪಾಣಿ ,ರಜೆ ದಿನಗಳನ್ನು ಹೊರತುಪಡಿಸಿ ಕಛೇರಿ ವೇಳೆಯಲ್ಲಿ ದೂರವಾಣಿ ಸಂಖ್ಯೆ 08338-222523 ಸಂಪರ್ಕಿಸಬಹುದು. ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ///