Belagavi News In Kannada | News Belgaum

ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್‌ ಕುಮಾರ್‌ ರಾಜೀನಾಮೆ

ಬಿಹಾರ: ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್‌ ಕುಮಾರ್ ರಾಜೀನಾಮೆ ನೀಡಿದ್ದಾರೆ. ಆಡಳಿತಾರೂಢ ಜೆಡಿ(ಯು)-ಬಿಜೆಪಿ ಮೈತ್ರಿಕೂಟದಲ್ಲಿನ ಗೊಂದಲದ ನಡುವೆಯೇ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದು,

ಬಿಜೆಪಿ-ಜೆಡಿಯು ನಡುವಿನ ಮೈತ್ರಿ ಮುರಿದುಬಿದ್ದಿದೆ. ಇಂದು ಮಧ್ಯಾಹ್ನ ರಾಜ್ಯಪಾಲರನ್ನು ಭೇಟಿಯಾಗಿ ತಮ್ಮ ನಿರ್ಧಾರ ತಿಳಿಸಿದ ಬಳಿಕ ರಾಜೀನಾಮೆ ನೀಡಿದ್ದಾರೆ.

ರಾಜೀನಾಮೆ ನೀಡಿರುವ ಕುರಿತು ಸ್ವತಃ ನಿತೀಶ್‌ ಕುಮಾರ್‌ ಅವರೇ ಮಾಧ್ಯಮದವರಿಗೆ ಮಾಹಿತಿ ನೀಡಿದ್ದು, ಇಲ್ಲಿಗೆ ಬಿಜೆಪಿ-ಜೆಡಿಯು ಮೈತ್ರಿ ಕೊನೆಗೊಳಿಸಿರುವ ಬಗ್ಗೆ ಅಧಿಕೃತವಾಗಿ ತಿಳಿಸಿದರು.

ಈ ಬಗ್ಗೆ ಹಿಂದಿಯಲ್ಲಿ ಟ್ವೀಟ್ ಮಾಡಿದ ಜೆಡಿಯುನ ಉಪೇಂದ್ರ ಕುಶ್ವಾಹಾ ಹೊಸ ರೂಪದಲ್ಲಿ, ಹೊಸ ಒಕ್ಕೂಟದ ನಾಯಕತ್ವದ ಹೊಣೆಗಾರಿಕೆಗಾಗಿ ಮುಂದುವರಿಯಿರಿ ನಿತೀಶ್‌ ಜೀ, ದೇಶ ನಿಮಗಾಗಿ ಕಾಯುತ್ತಿದೆ ಎಂದು ಟ್ವೀಟ್‌ ಮೂಲಕ ಅಭಿನಂದನೆಗಳನ್ನು ತಿಳಿಸಿದ್ದಾರೆ.