Belagavi News In Kannada | News Belgaum

ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣ: ಅಮೃತ್ ಪಾಲ್ ಜಾಮೀನು ಅರ್ಜಿ ವಜಾ

ಬೆಂಗಳೂರು: 545 ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮ  ಸಂಬಂಧ ಬಂಧದಲ್ಲಿರುವಂತ ಆರೋಪಿ ಅಧಿಕಾರಿ ಅಮೃತ್ ಪಾಲ್ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ಕೋರ್ಟ್ ಇಂದು ವಜಾಗೊಳಿಸಿದೆ.
ರಾಜ್ಯದಲ್ಲಿ ಬಹುದೊಡ್ಡ ಹಗರಣ ಎಂದೇ ಹೇಳಲಾಗುತ್ತಿದ್ದಂತ 545 ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮ ಸಂಬಂಧ ಇಂದು ಆರೋಪಿ ಅಧಿಕಾರಿ ಅಮೃತ್ ಪಾಲ್ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು, ಬೆಂಗಳೂರಿನ 52ನೇ ಸಿಸಿಹೆಚ್ ನ್ಯಾಯಾಲಯವು ವಿಚಾರಣೆ ನಡೆಸಿತು.
ನ್ಯಾಯಾಲಯಕ್ಕೆ ಸಿಐಡಿ ಪರ ಎಸ್ ಪಿಪಿ ಪ್ರಸನ್ನ ಕುಮಾರ್ ವಾದಿಸಿ, ಪ್ರಕರಣದ ತನಿಖೆ ಇನ್ನೂ ಮುಕ್ತಾಯವಾಗಿಲ್ಲ. ಅಮೃತ್ ಪಾಲ್ ಪ್ರಭಾವಿಯಾಗಿರುವುದರಿಂದ ತನಿಖೆ ಮೇಲೆ ಪರಿಣಾಮ ಬೀರಲಿದೆ. ಸಿಸಿ ಕ್ಯಾಮರಾ ದೃಶ್ಯಾವಳಿಯನ್ನು ಇನ್ನೂ ಪರಿಶೀಲನೆ ಮಾಡೋದು ಬಾಕಿ ಇದೆ. ಹೀಗಾಗಿ ಜಾಮೀನು ನೀಡದಂತೆ ಕೋರಿದರು. ಇನ್ನೂ ಹೈಕೋರ್ಟ್ ಕೂಡ ಆರೋಪಿಗಳಿಗೆ ಜಾಮೀನು ನೀರಾಕರಿಸಿರೋದನ್ನು ಕೋರ್ಟ್ ಗಮನಕ್ಕೆ ತಂದರು. ಈ ಹಿನ್ನಲೆಯಲ್ಲಿ ಬೆಂಗಳೂರಿನ 52ನೇ ಸಿಸಿಹೆಚ್ ನ್ಯಾಯಾಲಯವು ಆರೋಪಿ ಅಧಿಕಾರಿ ಅಮೃತ್ ಪಾಲ್ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಹೀಗಾಗಿ ಸಿಐಡಿ ಬಂಧನದಲ್ಲಿರುವಂತ ಅಮೃತ್ ಪಾಲ್ ಗೆ ಜೈಲೇ ಗತಿ ಎನ್ನುವಂತೆ ಆಗಿದೆ./////